ವಿಜಯಪುರದ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿಕಾಂ ನಂತರದ ವೃತ್ತಿ ಅವಕಾಶಗಳು ಕುರಿತು ಏಕದಿನ ಕಾರ್ಯಾಗಾರದಲ್ಲಿ ಡಾ. ಔದ್ರಾಮ ಉಪನ್ಯಾಸ ನೀಡಿದರು. ಭಾರತಿ ಮಠ, ನಿವೇದಿತಾ ಬಳ್ಳೂರಗಿ ಇದ್ದಾರೆ. 
ವಿಜಯಪುರ

ವಿದ್ಯಾರ್ಥಿಗಳು ಯೋಜಿತ ಸಿದ್ಧತೆ ಕೈಗೊಳ್ಳಲಿ

ವಿಜಯಪುರ : ಜೀವನದಲ್ಲಿ ಅಂದುಕೊAಡ ಯಶಸ್ಸು ಸಾಽಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಆರಂಭದಲ್ಲಿಯೇ ಸ್ಪಷ್ಟವಾದ ವೃತ್ತಿ ಗುರಿ ಹೊಂದುವ ಮೂಲಕ ಅಗತ್ಯ ಕೌಶಲಗಳನ್ನು ಬೆಳೆಸಿಕೊಳ್ಳುವ ಮೂಲಕ ಯೋಜಿತ ರೀತಿಯಲ್ಲಿ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಽಕಾರಿ ಡಾ. ಔದ್ರಾಮ ಹೇಳಿದರು.
ನಗರದ ಬಿಎಲ್‌ಡಿಇ ಸಂಸ್ಥೆಯ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮದ ಅಂಗವಾಗಿ ಬಿಕಾಂ ನಂತರದ ವೃತ್ತಿ ಅವಕಾಶಗಳು ಕುರಿತು ಏಕದಿನ ಕಾರ್ಯಾಗಾರ ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.
ಬಿಕಾಂ ಪದವಿಯ ನಂತರ ಲಭ್ಯವಿರುವ ವಿವಿಧ ವೃತ್ತಿ ಅವಕಾಶಗಳಾದ ಸಿಎ, ಸಿಎಂಎ, ಸಿಎಸ್, ಎಸಿಸಿಎ ಸೇರಿ ವಿವಿಧ ವೃತ್ತಿಪರ ಕೋರ್ಸ್ಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಭಾರತಿ ಮಠ ಮಾತನಾಡಿ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಜೀವನದ ಬೆಳವಣಿಗೆಗೆ ಅತ್ಯಂತ ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.ಕಾರ್ಯಕ್ರಮ ಸಂಯೋಜಕಿ ನಿವೇದಿತಾ ಬಳ್ಳೂರಗಿ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.