ಇಂಡಿ ನಗರದ ಆಡಳಿತ ಸೌಧದ ಮೂರನೇ ಮಹಡಿಯಲ್ಲಿ ತಾಲೂಕು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಆನಂದ ಕೆ., ಪೌರಾಯುಕ್ತ ಶಿವಾನಂದ ಪೂಜಾರಿ, ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮತ್ತಿತರರಿದ್ದರು.
ಇಂಡಿ: ನಗರದ ಅಭಿವೃದ್ಧಿಗಾಗಿ ಕೆಲಸ ಮಾಡುವ ಸಂಸ್ಥೆ ಇಂಡಿ ನಗರಾಭಿವೃದ್ಧಿ ಪ್ರಾಧಿಕಾರ, ಅದರ ಪ್ರಯೋಜನ ಪಡೆದು ಕಾರ್ಯ ರೂಪಿಸಿ ನಗರ ಅಭಿವೃದ್ಧಿ ಪಡಿಸುವ ಗುರಿಯಾಗಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ನಗರದ ಆಡಳಿತ ಸೌಧದ ಮೂರನೇ ಮಹಡಿಯಲ್ಲಿ ತಾಲೂಕು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಅಜೀತ ಧನಶೆಟ್ಟಿ ಮಾತನಾಡಿ, ನಗರಗಳ ವ್ಯವಸ್ಥಿತ ಬೆಳವಣಿಗೆಗೆ ಯೋಜನೆ ಸಿದ್ಧಪಡಿಸುವುದು ಮತ್ತು ಅನುಷ್ಠಾನಗೊಳಿಸುವುದು ಪ್ರಾಧಿಕಾರದ ಉದ್ದೇಶವಾಗಿದೆ. ಅಭಿವೃದ್ಧಿ ಪಡಿಸಿದ ಪ್ರದೇಶಗಳಲ್ಲಿ ರಸ್ತೆ, ನೀರು ಸರಬರಾಜು, ಒಳಚರಂಡಿ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವ ಗುರಿಯಾಗಿದೆ ಎಂದರು.
ನೂತನ ಅಧ್ಯಕ್ಷರಾಗಿ ಅಜೀತ ಧನಶೆಟ್ಟಿ, ಸದಸ್ಯರಾಗಿ ಚನ್ನಪ್ಪ ಮಲ್ಲಪ್ಪ ಬೋಡಿ, ರವೀಂದ್ರ ನಿಗಡಿ, ದತ್ತಾತ್ರೇಯ ಜೋಶಿ ಅಧಿಕಾರ ಸ್ವೀಕರಿಸಿದರು.
ಜಿಲ್ಲಾಽಕಾರಿ ಆನಂದ ಕೆ., ಪೌರಾಯುಕ್ತ ಶಿವಾನಂದ ಪೂಜಾರಿ, ಕಂದಾಯ ಉಪವಿಭಾಗಾಽಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ್ ಬಿ.ಎಸ್. ಕಡಕಬಾವಿ, ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಇಲಿಯಾಸ ಬೋರಾಮಣಿ, ವಕೀಲರ ಸಂಘದ ಅಧ್ಯಕ್ಷ ಸಿದ್ದಣ್ಣ ಬೂದಿಹಾಳ, ಅಶೋಕ ಗಜಾಕೋಶ, ಸಂದೀಪ ಧನಶೆಟ್ಟಿ, ಶಾಂತುಗೌಡ ಬಿರಾದಾರ, ಶ್ರೀಕಾಂತ ಕುಡಿಗನೂರ, ಸತೀಶ ಕುಂಬಾರ ಮತ್ತಿತರರಿದ್ದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಸದಸ್ಯರನ್ನು ವಿವಿಧ ಸಂಸ್ಥೆಗಳು ಮತ್ತು ಗಣ್ಯರು ಸನ್ಮಾನಿಸಿದರು.