ಬಸವನಬಾಗೇವಾಡಿ ಪಟ್ಟಣದ ಶ್ರೀ ಬಸವೇಶ್ವರ ಸರ್ಕಾರಿ ಪಪೂ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡ 77ನೇ ಗಣರಾಜೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತಹಸೀಲ್ದಾರ ಯಮನಪ್ಪ ಸೋಮನಕಟ್ಟಿ, ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಬಿಇಒ ವಸಂತ ರಾಠೋಡ, ಪುರಸಭೆ ಮುಖ್ಯಾಽಕಾರಿ ವಿದ್ಯಾಧರ ಕಲಾದಗಿ, ತಾ.ಪಂ ಇಒ ಪ್ರಕಾಶ ದೇಸಾಯಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಹಿಬೂಬ ನಾಯ್ಕಡಿ ಮತ್ತಿತರರಿದ್ದರು.
ಬಸವನಬಾಗೇವಾಡಿ: ವಿವಿಧತೆಯಲ್ಲಿ ಏಕತೆ ಕಾಣುವ ದೇಶ ಭಾರತ ದೇಶ ಇಲ್ಲಿ ಜಾತಿ ಧರ್ಮ ಯಾವುದು ಇಲ್ಲ ಜಾತ್ಯತೀತ ರಾಷ್ಟç ಭಾರತ ದೇಶ ಎಂದು ತಹಸೀಲ್ದಾರ ಯಮನಪ್ಪ ಸೋಮನಕಟ್ಟಿ ಹೇಳಿದರು.
ಸೋಮವಾರ ಪಟ್ಟಣದ ಶ್ರೀ ಬಸವೇಶ್ವರ ಸರ್ಕಾರಿ ಪಪೂ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡ 77 ನೇ ಗಣರಾಜೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ಸ್ವಾತಂತ್ರ ನಂತರ ಕಾನೂನು ಜಾರಿಗೊಳಿಸುವ ಉದ್ದೇಶದಿಂದ ಡಾ. ಬಿ.ಆರ್ ಅಂಬೇಡ್ಕರ ಅವರು ವಿವಿಧತೆಯಲ್ಲಿ ಏಕತೆ ಕಾಣಬೇಕು. ದೇಶದ ಬಾವುಟ ಯಾವಾಗಲೂ ಎತ್ತರಕ್ಕೆ ಹಾರುವಂತೆ ಮಾಡಬೇಕಾದ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ, ನಾವೆಲ್ಲರೂ ಒಟ್ಟಾಗಿ ಭಾರತವನ್ನು ವಿಶ್ವದ ಶ್ರೇಷ್ಠ ರಾಷ್ಟçವನ್ನಾಗಿ ಮಾಡೋಣ ಎಂದರು.
ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಬಿಇಒ ವಸಂತ ರಾಠೋಡ, ಪುರಸಭೆ ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ, ತಾ.ಪಂ ಇಒ ಪ್ರಕಾಶ ದೇಸಾಯಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಹಿಬೂಬ ನಾಯ್ಕಡಿ ಮತ್ತಿತರರಿದ್ದರು.
ಪಟ್ಟಣ ಸೇರಿ ತಾಲೂಕಿನಾದ್ಯಂತ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಶಾಲಾ-ಕಾಲೇಜುಗಳಲ್ಲಿ 77 ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.