ಬಿಎಲ್‌ಡಿಇ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಡಾ. -À.ಗು. ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ. ಪಾಟೀಲ ಹಾಗೂ ಬಂಗಾರಮ್ಮ ಸಜ್ಜನರವರ ಸ್ಮರಣೆ ಕಾರ್ಯಕ್ರಮ ಜು. 27ರಂದು ಬೆಳಗ್ಗೆ 10 ಗಂಟೆಗೆ ನಗರದ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಗ್ರಂಥಾ 
ವಿಜಯಪುರ

ಮಹಾತ್ಮರ ಸ್ಮರಣೆ ಕಾರ್ಯಕ್ರಮ

ಗಿರೀಶ ಸಗರ
ವಿಜಯಪುರ : ಬಿಎಲ್‌ಡಿಇ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಡಾ. -À.ಗು. ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ. ಪಾಟೀಲ ಹಾಗೂ ಬಂಗಾರಮ್ಮ ಸಜ್ಜನರವರ ಸ್ಮರಣೆ ಕಾರ್ಯಕ್ರಮ ಜು. 27ರಂದು ಬೆಳಗ್ಗೆ 10 ಗಂಟೆಗೆ ನಗರದ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ.
ಚಿಂತನ-ಸಾAಸ್ಕೃತಿಕ ಬಳಗದ ವತಿಯಿಂದ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಬೆಕ್ಕಿನ ಕಲ್ಮಠ ಮ.ನಿ.ಪ್ರ.ಸ್ವ ಜಗದ್ಗುರು ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬೆಳಗಾವಿ ಕೆಎಲ್‌ಇ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಅವಿನಾಶ ಕವಿ ಅವರು `ಅರಿವಿನ ಕುರುಹು, ಇಷ್ಟಲಿಂಗ ವೈಜ್ಞಾನಿಕ ಒಳನೋಟ' ಎಂಬ ವಿಷಯದ ಕುರಿತು ಉಪನ್ಯಾಸ ನೀಡುವರು. ಬಿಎಲ್‌ಡಿಇ ಸಂಸ್ಥೆಯ ಅಧ್ಯಕ್ಷ, ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ಚಿಂತನ ಬಳಗ ಕಾರ್ಯದರ್ಶಿ ಡಾ. ಮಹಾಂತೇಶ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿz್ದÁರೆ.