ವಿಜಯಪುರ: ಹೆಚ್ಚುತ್ತಿರುವ ಮೊಬೈಲ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ರೂ.1.07 ಕೋಟಿ ಮೌಲ್ಯದ 537 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ 28 ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಭೇದಿಸುವಲ್ಲಿ ಖಾಕಿ ಪಡೆ ಸಫಲವಾಗಿದೆ.
ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಲಕ್ಷ್ಮಣ ನಿಂಬರಗಿ ಅವರು, ‘ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ಗಳು ಸಾರ್ವಜನಿಕರ ದೈನಂದಿನ ಜೀವನದಲ್ಲಿ ಅತ್ಯಂತ ಅಗತ್ಯ ಸಾಧನಗಳಾಗಿವೆ. ಮೊಬೈಲ್ ಕಳೆದುಹೋದ ಅಥವಾ ಕಳ್ಳತನವಾದ ಕುರಿತು ಸಾರ್ವಜನಿಕರಿಂದ ಪ್ರತಿದಿನ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗುತ್ತಿವೆ. ಈ ದೂರುಗಳ ಆಧಾರದ ಮೇಲೆ ಪೊಲೀಸ್ ಇಲಾಖೆ ಸಿಇಐಆರ್ ಪೋರ್ಟಲ್ ಬಳಸಿಕೊಂಡು ಮೊಬೈಲ್ಗಳ ಪತ್ತೆಗೆ ಕ್ರಮ ಕೈಗೊಳ್ಳುತ್ತಿದೆ’ ಎಂದರು.
‘ಮೊಬೈಲ್ ಪತ್ತೆ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಸಾರ್ವಜನಿಕರು ತಮ್ಮ ಮೊಬೈಲ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಸಿಇಐಆರ್ ಪೋರ್ಟಲ್ನ ಸೌಲಭ್ಯವನ್ನು ಬಳಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.
ಡಿವೈಎಸ್ಪಿಗಳಾದ ನಾಗರಾಜ್, ಚಂದ್ರಕಾಂತ ನಂದರೆಡ್ಡಿ ಇದ್ದರು.