ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಕಾರ್ಯಕ್ರಮ ನಡೆಯಿತು. ಡಾ. ರಾಮು ಹಸನಪ್ಪ ಸಜ್ಜನ, ಶಂಕರಗೌಡ ಸೋಮನಾಳ, ಪ್ರೊ. ವಿಜಯಾ ಕೋರಿಶೆಟ್ಟಿ ಮತ್ತಿತರರಿದ್ದಾರೆ. 
ವಿಜಯಪುರ

ಮೌಲಾನಾ ಆಜಾದರ ತತ್ವ ಚಿಂತನೆ ಅನುಕರಣೀಯ

ವಿಜಯಪುರ: ದೇಶದ ಪ್ರಥಮ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪ್ರತಿಮವಾಗಿದ್ದು, ಅವರ ತತ್ವಗಳು ಇಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿವೆ ಎಂದು ಮುದ್ದೇಬಿಹಾಳದ ಎಂಜಿವಿಸಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಮು ಹಸನಪ್ಪ ಸಜ್ಜನ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲಾನಾ ಆಜÁದ್ ಅಧ್ಯಯನ ಕೇಂದ್ರದ ವತಿಯಿಂದ ಮೌಲಾನಾ ಆಜಾದ್ ಅವರ ಜನ್ಮದಿನದ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವಿದ್ಯಾರ್ಥಿನಿಯರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಮೌಲಾನಾ ಆಜಾದ್‌ರ ಜೀವನಾಧಾರಿತ ಕುರಿತ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿದ್ಯಾರ್ಥಿನಿಯರು ಇಂತಹ ಚಟುವಟಿಕೆಗಳ ಮೂಲಕ ಹೆಚ್ಚಿನ ಜ್ಞಾನ ಪಡೆದು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.
ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮೌಲ್ಯಮಾಪನ ಕುಲ ಸಚಿವ ಬಿ.ಎಲï. ಲಕ್ಕಣ್ಣವರ ಮತ್ತಿತರರಿದ್ದರು.
ಡಾ. ಗುಲಾಬ ರಾಠೋಡ ಸ್ವಾಗತಿಸಿದರು. ರಾಣಿ ತಿಮ್ಮಗೌಡರ ಪರಿಚಯಿಸಿದರು. ಪದ್ಮಶ್ರೀ ಚೌಗಲೆ ನಿರೂಪಿಸಿದರು. ಅಕ್ಷತಾ ರಾಠೋಡ ವಂದಿಸಿದರು.