- ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
- ಸಚಿವರ ಕಚೇರಿ ಪ್ರಕಟಣೆ
ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮೇ 1ರಿಂದ ಮೇ 3ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಮೇ 1ರಂದು ಬೆಳಗ್ಗೆ 10 ಗಂಟೆಗೆ ಬರಟಗಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಡಿ 734 ಲಕ್ಷ ರೂ. ವೆಚ್ಚದಲ್ಲಿ ಅರಕೇರಿ, ಬರಟಗಿ ಮತ್ತು ಹಂಚಿನಾಳ ಪಿ.ಎಚ್. ಹಾಗೂ ಬೆಳಗ್ಗೆ 11 ಗಂಟೆಗೆ ಲೋಹಗಾಂವ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ 978 ಲಕ್ಷ ರೂ. ವೆಚ್ಚದಲ್ಲಿ ಲೋಹಗಾಂವ, ಟಕ್ಕಳಕಿ, ಹುಬನೂರ, ಜಾಲಗೇರಿ, ಇಟ್ಟಂಗಿಹಾಳ, ಸಿದ್ಧಾಪೂರ ಗ್ರಾಮಗಳಲ್ಲಿ ಸರಣಿ ಬಾಂದಾರ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸದರಿ ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಬಾಂದಾರ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು.
ನಂತರ ಸಂಜೆ 5 ಗಂಟೆಗೆ ತಿಗಣಿಬಿದರಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ 984 ಲಕ್ಷ ರೂ. ವೆಚ್ಚದಲ್ಲಿ ಕಾಖಂಡಕಿ, ಬಬಲೇಶ್ವರ ಮಮದಾಪೂರ ಬಬಲೇಶ್ವರ, ಯಕ್ಕುಂಡಿ, ತಿಗಣಿಬಿದರಿ ತಾಜಪೂರ ಎಚ್. ಸರಣಿ ಬಾಂದಾರ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡುವರು.
ಮೇ 2ರಂದು ಬೆಳಗ್ಗೆ 10 ಗಂಟೆಗೆ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿದ ಪಟ್ಟಣ ಪಂಚಾಯಿತಿ ಕಟ್ಟಡ, ಪೊಲೀಸ್ ಠಾಣೆ ಕಟ್ಟಡ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಉದ್ಘಾಟಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಳ್ಳುವರು. ಬಳಿಕ ಮಧ್ಯಾಹ್ನ 2 ಗಂಟೆಗೆ ತಾಳಿಕೋಟೆ ರಸ್ತೆಯಲ್ಲಿರುವ ಹುಂಡೇಕಾರ ಹಾಲ್ನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು.
ಮೇ 3ರಂದು ಬೆಳಗ್ಗೆ 10 ಗಂಟೆಗೆ ಯಕ್ಕುಂಡಿ ಗ್ರಾಮದಲ್ಲಿ ಪಿಡಬ್ಲೂೃಡಿ 300 ಲಕ್ಷ ರೂ. ವೆಚ್ಚದಲ್ಲಿ ವಿಜಯಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-34 ಕಿಮೀ. 0.00 ರಿಂದ 3.00ರವರೆಗೆ ಯಕ್ಕುಂಡಿ-ಸಂಗಾಪೂರ ಎಚ್.ಎಚ್-ಶೇಗುಣಸಿ-ಕಾಖಂಡಕಿ ವಾಯಾ ಹರಳಯ್ಯನ ಗುಂಡವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು.
ಸಂಜೆ 5 ಗಂಟೆಗೆ ದೇವರಗೆಣ್ಣೂರ ಗ್ರಾಮದಲ್ಲಿ ಪಿಡಬ್ಲೂೃಡಿ ಇಲಾಖೆಯಡಿ 400 ಲಕ್ಷ ರೂ. ವೆಚ್ಚದಲ್ಲಿ ಕಂಬಾಗಿ-ದೇವರಗೆಣ್ಣೂರ ಗ್ರಾಮದವರೆಗೆ ಕಿಮೀ. 4.00 ರಿಂದ 8.00ರವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸುವರು. ಸಂಜೆ 6 ಗಂಟೆಗೆ ಮದಗುಣಕಿ ಗ್ರಾಮದ ಶಿವಣ್ಣವರ ವಸ್ತಿಯಿಂದ ಕೊಡಬಾಗಿ ರಸ್ತೆವರೆಗೆ ಪಿಡಬ್ಲೂೃಡಿ ಇಲಾಖೆಯಡಿ 150 ಲಕ್ಷ ರೂ. ವೆಚ್ಚದಲ್ಲಿ 3ಕಿಮೀ. ರಸ್ತೆ ಸುಧಾರಣೆ, ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಸಿಸಿ ರಸ್ತೆ ಕಾಮಗಾರಿ ಸಚಿವರು ಭೂಮಿ ಪೂಜೆ ನೆರವೇರಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.