ಸುನೀಲಗೌಡ ಪಾಟೀಲ, ವಿ.ಪ. ಸದಸ್ಯ.
ವಿಜಯಪುರ: ಯುವಕರನ್ನು ಯಾರೂ ಕೆಣಕಬಾರದು. ಅವರನ್ನು ಕೆಣಕಿದವರಾರೂ ಉದ್ಧಾರವಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಭಾರತ ಯುವಕರ ದೇಶ. ಯುವಕರು ದೇಶದ ಶಕ್ತಿ. ದೇಶದ ಭವಿಷ್ಯ ಯುವಕರ ಮೇಲೆ ನಿಂತಿದ್ದು, ಅವರು ಮನಸ್ಸು ಮಾಡಿದರೆ ಇತಿಹಾಸ ರಚಿಸಬಲ್ಲರು ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ ಪ್ರತಿ ವರ್ಷ 20 ಲಕ್ಷಕ್ಕೂ ಹೆಚ್ಚು ಯುವಕರು ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿದ್ದಾರೆ. ಅದಕ್ಕಾಗಿ ಹಗಲು-ರಾತ್ರಿ ಶ್ರಮವಹಿಸಿ ತಯಾರಿ ನಡೆಸುತ್ತಾರೆ. ಆದರೆ, ಪ್ರಶ್ನೆ ಸೋರಿಕೆಯಂತಹ ಘಟನೆಗಳು ವಿದ್ಯಾರ್ಥಿಗಳು ಮಾತ್ರವಲ್ಲ ಅವರ ಪೋಷಕರ ಕನಸು ಮತ್ತು ಶ್ರಮವನ್ನೂ ನುಚ್ಚುನೂರು ಮಾಡುತ್ತವೆ ಎಂದು ಸುನೀಲಗೌಡರು ಅಸಮಾಧಾನ ಹೊರ ಹಾಕಿದ್ದಾರೆ.
ಸದ್ಯ ದೇಶಾದ್ಯಂತ ಯುವಕರು ತಮಗಾಗಿರುವ ಅನ್ಯಾಯದ ವಿರುದ್ಧ ನೋವನ್ನು ಪ್ರತಿಭಟನೆಯ ರೂಪದಲ್ಲಿ ಹೊರ ಹಾಕುತ್ತಿz್ದÁರೆ. ಆದರೆ, ಕೇಂದ್ರ ಸರ್ಕಾರ ಈ ಪ್ರತಿಭಟನೆಯನ್ನು ನಿರ್ವಹಿಸುತ್ತಿರುವ ರೀತಿ ಖಂಡನೀಯ. ದೇಶದ ಭವಿಷ್ಯ ಎಂದೇ ಪರಿಗಣಿಸಲಾಗುವ ಯುವಕರು ನಮ್ಮ ಮಕ್ಕಳಿದ್ದಂತೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ನಾವೆಲ್ಲರೂ ಯುವಜನತೆ ಜತೆಗೆ ಪಕ್ಷಾತೀತವಾಗಿ ಬೆಂಬಲವಾಗಿ ನಿಲ್ಲಬೇಕಿದ್ದು, ಯುವಕರ ಭಾವನೆಗಳು ಮತ್ತು ವ್ಯಕ್ತಪಡಿಸುತ್ತಿರುವ ನೋವಿಗೆ ನಾವೆಲ್ಲರೂ ಧ್ವನಿಗೂಡಿಸಬೇಕಾಗಿದೆ ಎಂದು ತಿಳಿಸಿz್ದÁರೆ.
ಯುವಶಕ್ತಿಯನ್ನು ದೇಶದ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಬೇಕು. ಅವರ ಆಶೋತ್ತರಗಳಿಗೆ ಸ್ಪಂದಿಸಬೇಕು. ಅವರ ಬೇಡಿಕೆಗಳ ಕಡೆಗೆ ಗಮನ ಹರಿಸಬೇಕು. ಹಳೆಯ ಬೇರು ಮತ್ತು ಹೊಸ ಚಿಗುರು ಪರಸ್ಪರ ಒಂದಾಗಿ ಮುಂದುವರೆದಾಗ ಮಾತ್ರ ದೇಶದಲ್ಲಿ ಸಮೃದ್ಧಿ ಸಾಧ್ಯ. ನಾವೆಲ್ಲರೂ ಅವರೊಂದಿಗೆ ನಿಲ್ಲಬೇಕು. ಅಲ್ದೆ, ಅವರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ವಿ.ಪ. ಸದಸ್ಯ ಸುನೀಲಗೌಡ ಪಾಟೀಲ ಸಲಹೆ ನೀಡಿದ್ದಾರೆ