ಮುದ್ದೇಬಿಹಾಳ ಪಟ್ಟಣದ ಮಿನಿ ವಿಧಾನ ಸೌಧ ಆವರಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ತಹಸೀಲ್ದಾರ ಕೀರ್ತಿ ಚಾಲಕ ರಾಷ್ಟçಧ್ವಜಾರೋಹಣ ನೆರವೇರಿಸಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದರು. ತಾ.ಪಂ. ಇಒ ವೆಂಕಟೇಶ ಒಂದಾಲ, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಎಂಬಿ ನಾವದಗಿ, ತಾಲೂಕು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮತ್ತಿತರರಿದ್ದರು.
ಮುದ್ದೇಬಿಹಾಳ: ಎಲ್ಲಾ ಭಾರತೀಯರನ್ನು ಭಾವನಾತ್ಮಕ, ಭಾಷಿಕ, ಭೌಗೋಳಿಕ ಹಾಗೂ ಆಡಳಿತಾತ್ಮಕವಾಗಿ ಬೆಸುಗೆ ಹಾಕಿದ ದಿನವನ್ನು ಗಣರಾಜೋತ್ಸವ ದಿನವನ್ನಾಗಿ ಆಚರಿಸಲಾಗುತ್ತಿದೆ. ಶ್ರೇಷ್ಠ ಸಂವಿಧಾನವನ್ನು ಎಲ್ಲರು ಮನಃಪೂರ್ವಕವಾಗಿ ಅಂತಃಕರಣದಿAದ ಒಪ್ಪಿಕೊಂಡು ಸಂಭ್ರಮಿಸಿದ ದಿನ ಎಂದು ತಹಸೀಲ್ದಾರ ಕೀರ್ತಿ ಚಾಲಕ ಹೇಳಿದರು.
ಪಟ್ಟಣದ ಮಿನಿ ವಿಧಾನ ಸೌಧ ಆವರಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟçಧ್ವಜ ನೆರವೇರಿಸಿ ಅವರು ಮಾತನಾಡಿದರು.
ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನ ಜ.26, 1950ರಂದು ಜಾರಿಗೆ ಬಂದಿತು. ಅಂದಿನಿAದಲೂ ಸಂವಿಧಾನ ದಿನ ಹಾಗೂ ಗಣರಾಜ್ಯೋತ್ಸವ ದಿನವನ್ನಾಗಿ ಸಂಭ್ರಮದಿAದ ಆಚರಿಸುತ್ತಿದ್ದೇವೆ. ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ದೇಶಪ್ರೇಮದ ಗೀತೆಗಳಿಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದು ನೋಡುಗರನ್ನು ಗಮನ ಸೆಳೆಯಿತು.
ತಾ.ಪಂ. ಇಒ ವೆಂಕಟೇಶ ಒಂದಾಲ, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಎಂ.ಬಿ. ನಾವದಗಿ, ತಾಲೂಕು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಸಿಪಿಐ ಮಹಮದ್ ಫಸಿಯುದ್ದಿ, ಕ್ಷೇತ್ರ ಶಿಕ್ಷಣಾಽಕಾರಿ ಬಿ. ಎಸ್. ಸಾವಳಗಿ, ವೈ ವಿಜಯಕರ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗದೌಡ ಬಿರಾದಾರ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮತ್ತಿತರಿದ್ದರು.