ನಾಳೆ ಕುರಿ ಸಾಕಾಣಿಕೆ, ಉಣ್ಣೆ ಉತ್ಪಾದಕರ ಸಂಘದ ಸಭೆ 
ವಿಜಯಪುರ

ನಾಳೆ ಕುರಿ ಸಾಕಾಣಿಕೆ, ಉಣ್ಣೆ ಉತ್ಪಾದಕರ ಸಂಘದ ಸಭೆ

ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣ ಬಳಿಯ ಶ್ರೀ ನರಸಿಂಹ ದೇವಸ್ಥಾನದ ಸಭಾಂಗಣದಲ್ಲಿ ಜಿಲ್ಲಾ ಕುರುಬರ ಕುರಿ ಸಾಕಣಿಕೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ವಿಶೇಷ ಸರ್ವ ಸಾಧಾರಣ ಸಾಮಾನ್ಯ ಸಭೆಯನ್ನು ಜು.೧೯ರಂದು ಬೆಳಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ವಿಶೇಷ ಅಽಕಾರಿ ಆರ್.ಎಸ್. ಆಳೂರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದ್ದು, ಸಂಘದ ಸರ್ವ ಸದಸ್ಯರು ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಸಂಘದ ಕಾರ್ಯದರ್ಶಿ ಶಂಕರ ಬಾಡಗಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.