ಮುಧೋಳದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಬಾಲಕ, ಬಾಲಕಿಯರ ಸೈಕ್ಲಿಂಗ್ ಸ್ಪರ್ಧೆಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಚಾಲನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ, ಜಿಲ್ಲಾಽಕಾರಿ ಸಂಗಪ್ಪ, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಜಮಖಂಡಿ ಉಪ ವಿಭಾಗಾಽಕಾರಿ ಶ್ವೇತಾ ಬೀಡಿಕರ, ಇತರರಿದ್ದರು.
ಮುಧೋಳ : ಕ್ರೀಡೆಯಲ್ಲಿ ಕಾರ್ಮಿಕ ವರ್ಗದ ಯುವಕರಿಗೂ ಸಮಾನ ಅವಕಾಶ ಸಿಗಬೇಕು. ಕ್ರೀಡೆಯಿಂದ ಉತ್ಸಾಹ ಹೆಚ್ಚುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಮಾಲಾಪುರ- ಜೀರಗಾಳ ಬೈಪಾಸ್ ರಸ್ತೆಯಲ್ಲಿ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ, ಕುಮಕಾಲೆ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಸೈಕ್ಲಿಂಗ್ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕ, ಯುವತಿಯರಿಗಾಗಿ ಆಯೋಜಿಸಲಾದ ಸೈಕ್ಲಿಂಗ್ ಸ್ಪರ್ಧೆಯಂತಹ ಕಾರ್ಯಕ್ರಮಗಳು ಉತ್ಸಾಹ ಮೂಡಿಸುತ್ತವೆ ಮತ್ತು ದೈಹಿಕ ಚಟುವಟಿಕೆ ಮೂಲಕ ಆರೋಗ್ಯ ಸುಧಾರಿಸುತ್ತವೆ. ಸರ್ಕಾರದ ಯೋಜನೆಗಳು ಈ ರೀತಿಯ ಕ್ರೀಡಾ ಚಟುವಟಿಕೆಗಳನ್ನು ಬೆಂಬಲಿಸುತ್ತವೆ. ವಿದ್ಯಾರ್ಥಿ ದಿಸೆಯಲ್ಲಿ ಸೈಕ್ಲಿಂಗ್ ಅಭ್ಯಾಸ ಮಾಡಬೇಕು ಎಂದು ಯುವಕರಿಗೆ ಕರೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಮಾತನಾಡಿ, ಯುವ ಜನರಲ್ಲಿ ಕ್ರೀಡಾ ಚಟುವಟಿಕೆಗಳು ಹಾಸುಹೊಕ್ಕಾಗಿರಬೇಕು. ಕ್ರೀಡೆಗಳಿಂದ ಯುವಕರು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಬಾಗಲಕೋಟೆ ಜಿಲ್ಲೆಯ ಇಂತಹ ಪ್ರದೇಶಗಳಲ್ಲಿ ಸೈಕ್ಲಿಂಗ್‌ನಂತಹ ಕ್ರೀಡೆಗಳು ಸಾಂಸ್ಕೃತಿಕವಾಗಿ ಬೆಳೆಯುತ್ತಿರುವುದು ಸಂತೋಷಕರ ವಿಷಯ ಎಂದು ತಿಳಿಸಿದರು.
ಸರ್ಕಾರವು ಕ್ರೀಡಾ ಸೌಲಭ್ಯಗಳನ್ನು ಹೆಚ್ಚಿಸಲು ಬದ್ಧವಾಗಿದೆ. ಸ್ಥಳೀಯ ಕ್ರೀಡಾ ಸಾಧಕರು ರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹ ನಮ್ಮೆಲ್ಲರದಾಗಿರುತ್ತದೆ ಎಂದರು.
ಜಿಲ್ಲಾಧಿಕಾರಿ ಸಂಗಪ್ಪ, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಜಮಖಂಡಿ ಉಪ ವಿಭಾಗಾಽಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಪ್ರಕಾಶ ಗಾಯಕವಾಡ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಽಕಾರಿ ಮಲ್ಲಿಕಾರ್ಜುನ ಅಂಬಿಗೇರ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಕಾಂಗ್ರೆಸ್ ಮುಖಂಡ ಉದಯಸಿಂಗ್ ಪಡತಾರೆ, ಎಂ.ಎಂ. ಘಾರಗೆ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಡಾ. ಸಂಜಯ ಘಾರಗೆ, ಸಂಸ್ಥಾಪಕ ಅಧ್ಯಕ್ಷ ಪ್ರಲ್ಹಾದ ಕುಮಕಾಲೆ ಪ್ರಾಚಾರ್ಯ ಬಿ.ಎಸ್. ಇಂಗಳೆ, ಮಕಾಜಿ ಇಂಗಳೆ ಸೇರಿ ಇತರರಿದ್ದರು. ಸಂಗೀತಾ ಡಿ. ಹಾಗೂ ಮಂಜುನಾಥ ಬರಗಿ ನಿರೂಪಿಸಿದರು.
ವಿದ್ಯಾರ್ಥಿಗಳೊಂದಿಗೆ ಸಂವಾದ
ಈ ಸಂದರ್ಭದಲ್ಲಿ ರಾಜ್ಯದ ಮೂಲೆ ಮೂಲೆಯಿಂದ ಬಂದ ಕ್ರೀಡಾಪಟು ಹಾಗೂ ನಗರದ ಕಾಲೇಜು ವಿದ್ಯಾರ್ಥಿಗಳ ಜೊತೆಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಕೆಲಕಾಲ ಸಂವಾದ, ಚರ್ಚೆ ನಡೆಸಿದರು.