ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವಿಶೇಷ ಸಮಿತಿ ಸಭೆ ನಡೆಸಿದರು. ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿ.ಪಂ. ಮುಖ್ಯ ಯೋಜನಾಽಕಾರಿ ಸಿ.ಬಿ. ಕಂಬಾರ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಅರವಿಂದ ಹೂಗಾರ ಇತರರಿದ್ದಾರೆ.
ವಿಜಯವಾಣಿ ಸುದ್ದಿಜಾಲ ವಿಜಯಪುರ
`ಜಿಲ್ಲೆಯಲ್ಲಿನ ಹೋಂ ಸ್ಟೇ ಮಾಲೀಕರು ಪ್ರವಾಸೋದ್ಯಮ ಇಲಾಖೆಯ ಮಾರ್ಗಸೂಚಿಗಳನ್ವಯ ನಡೆಸಬೇಕು. ಇಲ್ಲದಿದ್ದರೆ ಅದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಅನಧಿಕೃತವಾಗಿ ಹೋಂ ಸ್ಟೇ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೋಂ ಸ್ಟೇ ಮಾಲೀಕರಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾಡಳಿತದ ಕೆಸ್ವಾನ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವಿಶೇಷ ಸಮಿತಿ ಸಭೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಹಾಯ ಧನದೊಂದಿಗೆ ಮೊಬೈಲ್ ಕ್ಯಾಂಟಿನ್ ಖರೀದಿಸುವ ಯೋಜನೆಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.
`ಭವಿಷ್ಯದಲ್ಲಿ ಅನಧಿಕೃತ ಹೋಂ ಸ್ಟೇ ನಿರ್ವಹಿಸಿದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮವಹಿಸಲಾಗುವುದು. ನಗರದಲ್ಲಿ ಪುರಾತನ ನೀರು ಸರಬರಾಜು ವ್ಯವಸ್ಥೆ (ಕರೇಜ್) ಅನುಷ್ಠಾನಗೊಳಿಸುವ ಸಂಬಂಧ ಪುರಾತತ್ವ, ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ತಕ್ಷಣವೇ ಕ್ರಿಯಾಯೋಜನೆ (ಡಿಪಿಆರ್) ಸಿದ್ಧಪಡಿಸಬೇಕು' ಎಂದು ಐಎಚ್‌ಸಿಎನ್‌ಎ-ï ಸಂಸ್ಥೆಯ ನಿರ್ದೇಶಕ ರಾಯಕರ್ ಅವರಿಗೆ ಸೂಚಿಸಿದರು.
ಸಾರ್ವಜನಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಅನುದಾನದಡಿ ನಗರದ ಐತಿಹಾಸಿಕ ತಾಜಬಾವಡಿ ಸ್ಮಾರಕವನ್ನು ಅಭಿವೃದ್ಧಿಪಡಿಸುವ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಪುರಾತತ್ವ, ವಸ್ತು ಸಂಗ್ರಹಾಲಯ ಇಲಾಖೆ ಅಽಕಾರಿಗಳು ಪ್ರವಾಸೋದ್ಯಮ ಇಲಾಖೆ ಸಮನ್ವಯದೊಂದಿಗೆ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಸೂಚಿಸಿದರು.
ನಗರದ ಐತಿಹಾಸಿಕ ಸ್ಮಾರಕಗಳಲ್ಲಿ ಮೂಲ ಸೌಕರ್ಯ ಒದಗಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಅವರಿಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಪ್ರಮುಖ ಪ್ರವಾಸಿ ತಾಣಗಳಿಗೆ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಯ (ಮನರೇಗಾ), ಸ್ವಚ್ಛ ಭಾರತ ಮಿಷನ್ ಹಾಗೂ ಮಹಾನಗರ ಪಾಲಿಕೆ ಅನುದಾನದಲ್ಲಿ ಮೂಲ ಸೌಕರ್ಯ ಒದಗಿಸಲು ಪ್ರಸ್ತಾವನೆ ಸಲ್ಲಿಸಲು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಹಿಳೆ ಮತ್ತು ಮಕ್ಕಳ ಸಂರಕ್ಷಣೆಗಾಗಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸಿ ಮಿತ್ರ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಮಕ್ಕಳ ಸಂರಕ್ಷಣೆ ಜಾಗೃತಿಗಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ: ೧೦೯೮ ಕರೆ ಮಾಡಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಽಕಾರಿಗಳು ಸಭೆಗೆ ಮಾಹಿತಿ ನೀಡಿದರು.
೨೦೨೪-೨೫ನೇ ಸಾಲಿನ ಆಯವ್ಯಯದಲ್ಲಿ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ ಮಾದರಿಯಲ್ಲಿ) ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಹಾಗೂ ಕ್ರೂಸ್ ಟೂರಿಸಂ ಅಭಿವೃದ್ಧಿಪಡಿಸಲು ಈಗಾಗಲೇ ಸಮಿತಿಯ ಶಿಫಾರಸು ಮಾಡಿರುವಂತೆ ಆಲಮಟ್ಟಿ ಹಿನ್ನೀರಿನ ಪ್ರದೇಶದಲ್ಲಿ ಬರುವ ಮರೆಮಟ್ಟಿ ಗ್ರಾಮದ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಲಾಗಿದ್ದು, ಈ ನಿವೇಶನಕ್ಕೆ ಕೆಬಿಜೆಎನ್‌ಎಲ್ ಅಽಕಾರಿಗಳು ಅನುಮತಿ ನೀಡಬೇಕು. ಪ್ರವಾಸೋದ್ಯಮ ಇಲಾಖೆಯ `ಒನ್ ಡಿಸ್ಟ್ರೀಕ್ ಒನ್ ಡೆಸ್ಟಿನೇಷನ್' ಯೋಜನೆಯಡಿ ಆಲಮಟ್ಟಿ ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸಲು ಹಾಗೂ ಸಾರ್ವಜನಿಕರಿಗೆ ಮೂಲ ಸೌಕರ್ಯ ಒದಗಿಸಿ ಮಾದರಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಕುರಿತು ಆಲಮಟ್ಟಿಯ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರರೊಂದಿಗೆ ಚರ್ಚಿಸಲಾಯಿತು.
ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾಗಿರುವ ಯಾತ್ರಿನಿವಾಸ, ಮೂಲ ಸೌಕರ್ಯ ಕಾಮಗಾರಿಗಳ ಪ್ರಗತಿ ಪರೀಶೀಲನೆ ಮಾಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲು ಹಾಗೂ ಪ್ರಾರಂಭಿಸದೆ ಇರುವ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮುಕ್ತಾಯಗೊಳಿಸಲು ಕೆಆರ್‌ಐಡಿಎಲ್, ನಿರ್ಮಿತಿ ಕೇಂದ್ರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜ್ಞಾನ ಭಾರತಂ ಮಿಷನ್'ಗೆ ಸಹಕರಿಸಿ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ `ಜ್ಞಾನ ಭಾರತಂ ಮಿಷನ್' ಯೋಜನೆಯಡಿ ದೇಶಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಹಸ್ತಪ್ರತಿಗಳು ಹಾಗೂ ಐತಿಹಾಸಿಕ ದಾಖಲೆಗಳನ್ನು ಸಂರಕ್ಷಿಸಿ, ಡಿಜಿಟಲೀಕರಣ ಮಾಡುವ ಮಹತ್ತರ ಕಾರ್ಯ ಆರಂಭವಾಗಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಮನವಿ ಮಾಡಿದರು.
ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಶಾಶ್ವತವಾಗಿ ಉಳಿಸುವ ಜೊತೆಗೆ, ಸಾರ್ವಜನಿಕರಿಗೆ ಒಂದೇ ರಾಷ್ಟ್ರೀಯ ವೇದಿಕೆ ಮೂಲಕ ಡಿಜಿಟಲ್ ರೂಪದಲ್ಲಿ ಇವುಗಳನ್ನು ಲಭ್ಯವಾಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಯೋಜನೆಯ ಭಾಗವಾಗಿ ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ನೋಂದಣಿ, ವಿಮರ್ಶಾತ್ಮಕ ಸಂಪಾದನೆ ಮತ್ತು ಮೊಬೈಲ್ ಪ್ರಕಟಣೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ವಿಶೇಷ ಅಪ್ಲಿಕೇಷನ್ ಮೂಲಕ ದೇಶಾದ್ಯಂತ ಇರುವ ಹಸ್ತಪ್ರತಿಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಿ, ರಾಷ್ಟ್ರೀಯ ಹಸ್ತಪ್ರತಿ ಭಂಡಾರದಲ್ಲಿ ಸಂಗ್ರಹಿಸಲಾಗುತ್ತದೆ. ಇದರಿಂದಾಗಿ ಈ ಅಮೂಲ್ಯ ಜ್ಞಾನವನ್ನು ಜಾಗತಿಕ ಮಟ್ಟದಲ್ಲಿ ಹಂಚಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಸ್ಥಳೀಯ ಸಂಸ್ಥೆಗಳು ಹಾಗೂ ಸಂರಕ್ಷಕರಲ್ಲಿ ಈ ಕುರಿತು ಜಾಗೃತಿ ಮೂಡಿಸಿ, ನಿಯಮಿತ ಪ್ರಗತಿ ವರದಿ ನೀಡಬೇಕೆಂದು ಡಿಸಿ ಸಂಬಂಧಿಸಿದವರಿಗೆ ಸೂಚನೆ ನೀಡಿದರು.
ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಸಿ.ಬಿ. ಕಂಬಾರ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಅರವಿಂದ ಹೂಗಾರ ಇತರರಿದ್ದರು.