ವಿಜಯಪುರದ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಸಾಽಸಲು ಪರಿಶೀಲನಾ ಸಭೆ ನಡೆಯಿತು. ಎಸ್.ಆರ್. ಪಾಟೀಲ (ಬ್ಯಾಡಗಿ), ಇಲಿಯಾಸ ಬೋರಾಮಣಿ, ರಿಷಿ ಆನಂದ ಮತ್ತಿತರರಿದ್ದಾರೆ.
ವಿಜಯಪುರ: ಬಡವರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಮತ್ತು ಅವರು ಸ್ವಾವಲಂಬಿಯಾಗಿ ಜೀವನ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ. ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಲಭಿಸುವಂತೆ ನೋಡಿಕೊಂಡು ಮಹತ್ವಾಕಾಂಕ್ಷಿ ಯೋಜನೆಗಳ ಲಾಭ ಜನರಿಗೆ ತಲುಪಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಽಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ) ಹೇಳಿದರು.
ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಸಾಽಸಲು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನಸಾಮಾನ್ಯರ ಬದುಕಿನಲ್ಲಿ ಸುಭದ್ರತೆಯ ಭಾವನೆ ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ರಾಜ್ಯ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳು ಎಲ್ಲ ವರ್ಗದ ಜನರಿಗೂ ಅನುಕೂಲ ಒದಗಿಸಿವೆ.
ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದ ಕೆಲಸವನ್ನು ಆಸಕ್ತಿಯಿಂದ ಹಾಗೂ ಶ್ರದ್ಧೆಯಿಂದ ಅಽಕಾರಿಗಳು ನಿರ್ವಹಿಸಬೇಕು ಸೂಚನೆ ನೀಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನು ನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಸೌಲಭ್ಯ ಎಲ್ಲ ಅರ್ಹ ಫಲಾನುಭವಿಗಳಿಗೆ ಒದಗಿಸಬೇಕು. ಈ ಸೌಲಭ್ಯಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ಅಽಕಾರಿಗಳು ಕ್ರಮ ವಹಿಸಬೇಕೆಂದು ತಿಳಿಸಿದರು.
ಪಂಚ ಗ್ಯಾರಂಟಿ ಯೋಜನೆಯ ಸಂಬAಽತ ಅಽಕಾರಿಗಳು ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಜನವರಿ ಮಾಹೆಯವರೆಗೆ 17,99,34,366 ಮಹಿಳೆಯರು ಪ್ರಯಾಣಿಸಿದ್ದು, 607.93 ಕೋಟಿ ರೂ. ವೆಚ್ಚವಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಜನವರಿ ಅಂತ್ಯಕ್ಕೆ 4,46,616 ಒಟ್ಟು -Àಲಾನುಭವಿಗಳಿದ್ದು, ಈ ಯೋಜನೆಯಡಿ 538.15 ಕೋಟಿ ರೂ. ಜಮೆಯಾಗಿದೆ. ಯುವ ನಿಽ ಯೋಜನೆಯಡಿ 2025ರ ಡಿಸೆಂಬರ್ ಮಾಹೆಯವರೆಗೆ ಒಟ್ಟು 17,467 ಯುವನಿಧಿ -ಫಲಾನುಭವಿಗಳಾಗಿದ್ದು, ಅವರಿಗೆ 51,78,01,500 ರೂ.ಗಳನ್ನು ನೇರ ವರ್ಗಾವಣೆ (ಡಿ.ಬಿ.ಟಿ) ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದರು.
ಜಿ.ಪಂ. ಸಿಇಒ ರಿಷಿ ಆನಂದ, ಪಾಲಿಕೆ ವ್ಯಾಪ್ತಿಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಬ್ಬೀರ ಜಾಗೀರದಾರ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಹೊನ್ನಮಲ್ಲ ಸಾರವಾಡ, ಸುಂದರಪಾಲ್ ರಾಠೋಡ, ನಬಿಲಾಲ ನಾಯ್ಕೊಡಿ, ಆನಂದ ಜಾಧವ, ಮಹಾದೇವಿ ಗೋಕಾಕ, ಜಿ.ಪಂ.ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಅಽಕಾರಿಗಳಾದ ವಿನಯಕುಮಾರ ಪಾಟೀಲ, ಸಿದ್ಧಪ್ಪ ಬಿಂಜಗೇರಿ, ಕೆ.ಕೆ. ಚವಾಣ್, ಮಹೇಶ ಮಾಳವಾಡೇಕರ, ನಾರಾಯಣಪ್ಪ ಕುರುಬರ, ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ ಮತ್ತಿತರರಿದ್ದರು.
ಜಿಲ್ಲಾ ಮಟ್ಟದ ಸಮಾವೇಶ
ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ 21ರಂದು ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ-ಉತ್ಸವ ಹಾಗೂ ಫಲಾನುಭವಿಗಳೊಂದಿಗೆ ಚರ್ಚೆ ಸಮಾರಂಭ ನಡೆಯಲಿದೆ. ಈ ಸಮಾರಂಭವನ್ನು ಒಂದು ಉತ್ಸವದಂತೆ ಆಚರಿಸಲು ಉದ್ದೇಶಿಸಲಾಗಿದ್ದು, ಗ್ಯಾರಂಟಿ ಸಮಾವೇಶವು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಸಂಭ್ರಮದಿಂದ ಜರುಗುವ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಬೇಕು. ಸಮಾವೇಶದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರತ್ಯೇಕ ಮಾಹಿತಿ ಮಳಿಗೆ ಸ್ಥಾಪಿಸಿ ಗ್ಯಾರಂಟಿ ಶಿಷ್ಟಾಚಾರ ಪಾಲಿಸುವ ಜತೆಗೆ ಕಾರ್ಯಕ್ರಮ ಯಾವುದೇ ಲೋಪದೋಷಗಳಿಲ್ಲದಂತೆ ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಽಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ) ಸೂಚಿಸಿದರು.