ಮೈಸೂರು: ಕರ್ನಾಟಕ ಕುಸ್ತಿ ಸಂಘ ಹಾಗೂ ಜಿಲ್ಲಾ ಸಂಘಗಳ ಸಂಯುಕ್ತಾಶ್ರಯದಲ್ಲಿ ಫೆ.6 ರಿಂದ 8ರವರೆಗೆ ನಂಜನಗೂಡಿನ ಊಟಿ ರಸ್ತೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರು ಮತ್ತು ಮಹಿಳೆಯರ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘಟನಾ ಅಧ್ಯಕ್ಷ ಪೈ. ಪ್ರಸನ್ನ ತಿಳಿಸಿದರು.
ಸಂಸದ ಸುನೀಲ್ ಬೋಸ್ ಹಾಗೂ ಶಾಸಕ ದರ್ಶನ್ ಧ್ರುವನಾರಾಯಣ ಸಾರಥ್ಯ ವಹಿಸಲಿದ್ದಾರೆ. ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಚಾಲನೆ ನೀಡಲಿದ್ದಾರೆ. ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪಂದ್ಯಾವಳಿಯಲ್ಲಿ ರಾಜ್ಯದ ಎಲ್ಲೆಡೆಯಿಂದ ಕುಸ್ತಿಪಟುಗಳು ಆಗಮಿಸಲಿದ್ದಾರೆ. ಇಲ್ಲಿ ವಿಜೇತರಾದವರು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ನೇರವಾಗಿ ಆಯ್ಕೆಯಾಗಲಿದ್ದಾರೆ. ವಿಜೇತರೆಲ್ಲರಿಗೂ ಗದೆ ಹಾಗೂ ನಗದು ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಆಯೋಜಕರಾದ ಮಹದೇವಮೂರ್ತಿ, ಗಿರೀಶ್ ತೊರೆಮಾವು, ಡಾ.ಕೆ.ವಿನೋದ್‌ಕುಮಾರ್, ರ‌್ಯಾಂಬೋ ಕಿರಣ್, ಶ್ರೀಕಂಠ ಪ್ರಸಾದ್ ಇದ್ದರು