ವಿಜಯಪುರದ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಏಕ್ ಪೇಡ್ ಮಾ ಕೆ ನಾಮ್ ಹಾಗೂ ಒನ್ ಕೆಡೆಟ್ ಒನ್ ಟ್ರೀ ಸಸಿ ನೆಡುವ ಕಾರ್ಯಕ್ರಮದಲ್ಲಿ ಗಣ್ಯರು ಸಸಿ ನೆಟ್ಟು ನೀರುಣಿಸುದರು. ಬಿ.ಕೆ.ಕೆ. ವಂಶಿ, ಎಸ್.ಬಿ. ಕಮತೆ, ಎ.ಟಿ. ಶ್ರೀನಿವಾಸ್ ಮತ್ತಿತರರಿದ್ದಾರೆ. 
ವಿಜಯಪುರ

ಕರ್ನಲ್ ಬಿ.ಕೆ.ಕೆ. ವಂಶಿ ಕರೆ | ಒನ್ ಟ್ರೀ ಸಸಿ ನೆಡುವ ಕಾರ್ಯಕ್ರಮ

ಪ್ರತಿಯೊಬ್ಬರಿಗೂ ಪರಿಸರ ಸಂರಕ್ಷಣೆ ಅಗತ್ಯ

ವಿಜಯಪುರ: ಎನ್‌ಸಿಸಿ ಕೆಡೆಟ್ ಸೇರಿ ಪ್ರತಿಯೊಬ್ಬರು ಸೂಕ್ತ ಸ್ಥಳದಲ್ಲಿ ಕನಿಷ್ಠ ಒಂದು ಗಿಡ ನೆಟ್ಟು, ಅದನ್ನು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದು 36 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಕಮಾಂಡಿAಗ್ ಆಫೀಸರ್ ಕರ್ನಲ್ ಬಿ.ಕೆ.ಕೆ. ವಂಶಿ ಕರೆ ನೀಡಿದರು.

ನಗರದ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ. ವಿಜ್ಞಾನ ಮಹಾವಿದ್ಯಾಲಯ ಹಾಗೂ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಎನ್‌ಸಿಸಿ ಘಟಕ, 36 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಏಕ್ ಪೇಡ್ ಮಾ ಕೆ ನಾಮ್ ಹಾಗೂ ಒನ್ ಕೆಡೆಟ್ ಒನ್ ಟ್ರೀ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒನ್ ಕೆಡೆಟ್ ಒನ್ ಟ್ರೀ ಅಭಿಯಾನವು ಪರಿಸರ ಜಾಗೃತಿ ಮೂಡಿಸುವುದರ ಜತೆಗೆ ಗಿಡ ನೆಟ್ಟು ಪೋಷಿಸುವ ಜವಾಬ್ದಾರಿಯನ್ನು ಕೆಡೆಟ್‌ಗಳಲ್ಲಿ ಬೆಳೆಸುವ ಉದ್ದೇಶ ಹೊಂದಿದೆ ಎಂದರು.

ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಬಿ. ಕಮತೆ, ಎಸ್‌ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಎ.ಟಿ. ಶ್ರೀನಿವಾಸ್, 36 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಆಡಳಿತಾಽಕಾರಿ ಲೆಫ್ಟಿನೆಂಟ್ ಕರ್ನಲ್ ಅಜಯ್ ಸಿಂಗ್, ಅಸೋಸಿಯೇಟ್ ಎನ್‌ಸಿಸಿ ಅಽಕಾರಿ ಲೆಫ್ಟಿನೆಂಟ್ ರಾಮಚಂದ್ರ ನಾಯಕ್ ಎಂ.ಮತ್ತಿತರರಿದ್ದರು.

ಕಾರ್ಯಕ್ರಮದಲ್ಲಿ ಕರ್ನಲ್ ವಂಶಿ ಹಾಗೂ ಲೆಫ್ಟಿನೆಂಟ್ ಕರ್ನಲ್ ಅಜಯ್ ಸಿಂಗ್ ಅವರನ್ನು ಸನ್ಮಾನಿಸಲಾಯಿತು. ಕೊನೆಯಲ್ಲಿ ಗಣ್ಯರು ಕಾಲೇಜು ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರುಣಿಸಿದರು.