ವಿಜಯಪುರ ನಗರದ ಸೇಂಟ್ ಜೋಸೆಫ್ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು. ಎಚ್. ಶಶಿಧರ ಶೆಟ್ಟಿ, ಮಂಜುನಾಥ ಗುಳೆದಗುಡ್ಡ, ಎ.ಜೆ. ಬಾಸ್ಕೋ, ಅರವಿಂದ್ ಎಸ್. ಹಾಗರಗಿ, ರಾಘವೇಂದ್ರ ಹೊಸೂರು ಮತ್ತಿತರರಿದ್ದಾರೆ. 
ವಿಜಯಪುರ

ಮಕ್ಕಳು ದೇಶದ ಸಿರಿ ಸಂಪತ್ತು

ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಅಭಿಪ್ರಾಯ ಸುರಕ್ಷಿತ ಬಾಲ್ಯ ಅಭಿಯಾನ

ವಿಜಯಪುರ: ಮಕ್ಕಳ ಭವಿಷ್ಯದ ಭದ್ರ ಬದುಕು ರೂಪಗೊಳ್ಳಲು ಅವರು ಪಡೆದ ಬಾಲ್ಯದ ಸಂಸ್ಕಾರ ಮುಖ್ಯವಾಗಿರುತ್ತದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸೇಂಟ್ ಜೋಸೆಫ್ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಮಕ್ಕಳು ದೇಶದ ಸಿರಿ ಸಂಪತ್ತು. ಇಂದು ಮಕ್ಕಳ ಸುರಕ್ಷತೆ, ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಉಜ್ವಲ ಭವಿಷ್ಯವನ್ನು ನಿರ್ಮಿಸುವ ಉದ್ದೇಶದಿಂದ ಸುರಕ್ಷಿತಾ ಬಾಲ್ಯ ಅಭಿಯಾನ ಎಂಬ ಈ ಪರಿಕಲ್ಪನೆಯನ್ನು ಅನುಷ್ಠಾನಕ್ಕೆ ತರಲಾಗಿದ್ದು, ಭಾರತದಲ್ಲಿರುವ ಕಟ್ಟಕಡೆಯ ಮಗುವಿಗೂ ಕೂಡಾ ಸುರಕ್ಷತೆಯ ನೆಮ್ಮದಿಯ ಜೀವನವನ್ನು ದೊರಕಿಸಿಕೊಡುವುದೇ ಇದರ ಉದ್ದೇಶವಾಗಿದೆ. ಮಕ್ಕಳ ಬಾಲ್ಯವನ್ನಿ ಕಿತತ್ತುಕೊಳ್ಳುವ ಅಧಿಕಾರ ಯಾರಿಗೂ ಇರುವುದಿಲ್ಲ. ಇಂದು ಮಕ್ಕಳ ಸುರಕ್ಷತೆಗಾಗಿ ಅನೇಕ ಕಠಿಣ ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದರೂ ಸಹ ಇನ್ನು ಬಾಲ್ಯ ವಿವಾಹ, ಬಾಲ ಕಾರ್ಮಿಕರ ಬಗ್ಗೆ ವರದಿಯಾಗಿರುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.

ಡಿಡಿಪಿಯು ಮಂಜುನಾಥ ಗುಳೆದಗುಡ್ಡ ಮಾತನಾಡಿ, ಸಾಮಾಜಿಕ ಮಾಧ್ಯಮ ಮತ್ತು ಮೊಬೈಲ್ ಬಳಕೆಯಿಂದು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯು ಕುಂಠಿತವಾಗುತ್ತಿದೆ. ಆನ್‌ಲೈನ್‌ನಲ್ಲಿ ಬರುವ ಆಟಗಳನ್ನು ವಿದ್ಯಾರ್ಥಿಗಳು ಆಡುವುದರಿಂದ ಮನೋಖಿನ್ನತೆಗೆ ಒಳಗಾಗುತ್ತಿದ್ದಾರೆ. ಓದು ಬರಹದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವದ್ಧಿಯಾಗುತ್ತದೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ್ ಎಸ್. ಹಾಗರಗಿ, ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಹರೀಶ ಎ., ನಗರ ವಲಯದ ಬಿಇಒ ರಾಘವೇಂದ್ರ ಹೊಸೂರು, ಬಿಆರ್‌ಸಿ ಸುಜಾತಾ ಹಿರೇಮಠ, ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಎ.ಜೆ. ಬಾಸ್ಕೋ ಮತ್ತಿತರರಿದ್ದರು.