ಜಿಲ್ಲೆ

ವಿಜಯವಾಣಿ, ದಿಗ್ವಿಜಯ ಆಯೋಜಿಸಿರುವ ಎಜುಕೇಷನ್ ಎಕ್ಸ್‌ಪೋಗೆ ಚಾಲನೆ

ಸದೇಶ್ ಕಾರ್ಮಾಡ್

ಮೈಸೂರು: ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ಶೈಕ್ಷಣಿಕ ಮಾರ್ಗದರ್ಶನ ನೀಡುವ ಸಲುವಾಗಿ ನಂ.1 ಕನ್ನಡ ದೈನಿಕ ‘ವಿಜಯವಾಣಿ’ ಹಾಗೂ ದಿಗ್ವಿಜಯ ನ್ಯೂಸ್ ಚಾನಲ್ ವತಿಯಿಂದ ನಗರದ ವಿನೋಬಾ ರಸ್ತೆಯ ನಂಜರಾಜ ಬಹದ್ದೂರ್ ಛತ್ರದಲ್ಲಿ ಎರಡು ದಿನಗಳ ಕಾಲ ಹಮ್ಮಿ ಕೊಂಡಿರುವ ಎಜುಕೇಷನ್ ಎಕ್ಸ್‌ಪೋಗೆ ಶನಿವಾರ ಚಾಲನೆ ದೊರೆಯಿತು.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಎಜುಕೇಷನ್ ಎಕ್ಸ್‌ಪೋಗೆ ಚಾಲನೆ ನೀಡಿ ಮಾತ ನಾಡಿ, ‘ವಿಜಯವಾಣಿ’ ಹಾಗೂ ದಿಗ್ವಿಜಯ ನ್ಯೂಸ್ ಚಾನಲ್ ಹಮ್ಮಿಕೊಂಡಿರುವ ಎಜುಕೇಷನ್ ಎಕ್ಸ್‌ಪೋನಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಿದೆ. ಪ್ರತಿಯೊಂದು ವಿದ್ಯಾರ್ಥಿಗಳು ಒಂದೊಂದು ಕಾಲೇಜಿಗೆ ಹೋಗಿ ಕೋರ್ಸ್ ಹಾಗೂ ಕಾಲೇಜಿನ ಕುರಿತು ಮಾಹಿತಿ ಪಡೆಯಲು ಸಾಕಷ್ಟು ಸಮಯ ಬೇಕಾಗುತ್ತದೆ. ಆದರೆ, ಈ ಎಜುಕೇಷನ್ ಎಕ್ಸ್‌ಪೋನಲ್ಲಿ ಒಂದೇ ಸೂರಿನಡಿ ವಿದ್ಯಾರ್ಥಿಗಳಿಗೆ ವಿವಿಧ ಕಾಲೇಜುಗಳು ಹಾಗೂ ವಿಶ್ವ ವಿದ್ಯಾಲಯಗಳ ಕುರಿತು ಮಾಹಿತಿಯನ್ನು ಕಲೆಹಾಕಲು ವ್ಯವಸ್ಥೆ ಕಲ್ಪಿಸಿರುವುದು ಸ್ವಾಗತಾರ್ಹ ಎಂದರು.

ಪ್ರಸ್ತುತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಕೌಶಲ್ಯದ ಶಿಕ್ಷಣದ ಅವಶ್ಯಕತೆಯೂ ಇದೆ. ಯಾವ ಕಾಲೇಜಿನಲ್ಲಿ ಯಾವ ರೀತಿಯ ಶಿಕ್ಷಣ ದೊರೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಎಕ್ಸ್‌ಪೋ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಎಜುಕೇಷನ್ ಎಕ್ಸ್‌ಪೋ ವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ತಂತ್ರಜ್ಞಾನ ಅಕಾಡೆಮಿ ಕುಲಸಚಿವ ಬಿ. ಮಂಜುನಾಥ ಮಾತನಾಡಿ, ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ನೀಡಬೇಕು ಎಂಬುದು ಎಲ್ಲರ ಆಶಯವಾಗಿದೆ. ಈ ಎಕ್ಸ್‌ಪೋದಿಂದ ವಿದ್ಯಾರ್ಥಿ ಗಳು ತಮಗೆ ಇಷ್ಟವಾದ ಕಾಲೇಜುಗಳ ಕುರಿತು ಮಾಹಿತಿ ಪಡೆದುಕೊಳ್ಳಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಂ.ಪಿ.ನಾಗಮ್ಮ ಮಾತನಾಡಿ, ವಿಜಯವಾಣಿ ಹಾಗೂ ದಿಗ್ವಿಜಯ ಬಳಗದವರು ಜನರಿಗೆ ಉಪಯುಕ್ತವಾದ ಮಾಹಿತಿಯನ್ನು ಪ್ರತಿನಿತ್ಯ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ. ಅದರ ಜತೆಗೆ ವಿದ್ಯಾರ್ಥಿ ಗಳಿಗೆ ಅನುಕೂಲಕರವಾದ ಎಜುಕೇಷನ್ ಎಕ್ಸ್‌ಪೋ ಹಮ್ಮಿಕೊಂಡಿರುವುದು ಸ್ವಾಗತಾರ್ಹ. ಈ ಎಕ್ಸ್‌ಪೋನಲ್ಲಿ ಕೇವಲ ಮೈಸೂರಿನ ಕಾಲೇಜುಗಳು ಮಾತ್ರವಲ್ಲದೆ ರಾಜ್ಯದ ವಿವಿಧ ಕಾಲೇಜುಗಳು ಭಾಗವಹಿಸಿವೆ. ಹೀಗಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳು ಒಂದೇ ಕಡೆ ದೊರೆಯಲಿದೆ. ಈ ಎಕ್ಸ್‌ಪೋ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿ ಎಂದು ಹಾರೈಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ, ಕಾಲೇಜುಗಳನ್ನು ಹುಡುಕಿಕೊ ಂಡು ಹೋಗಿ ಮಾಹಿತಿ ಕಲೆ ಹಾಕುವುದು ವಿದ್ಯಾರ್ಥಿಗಳಿಗೆ ಕಷ್ಟದ ಕೆಲಸ. ಆದರೆ, ಎಜುಕೇಷನ್ ಎಕ್ಸ್‌ಪೋಗೆ ಆಗಮಿಸಿದರೆ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು ಎಂದು ಹೇಳಿದರು.

ವಿಜಯವಾಣಿ ಹಾಗೂ ದಿಗ್ವಿಜಯ ಮಾಧ್ಯಮ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊ ಂಡು ಬಂದಿದೆ. ಅದೇ ರೀತಿ ರೈತರ ಅನುಕೂಲಕೋಸ್ಕರ ಕೃಷಿ ಮೇಳವನ್ನು ಯಶಸ್ವಿಯಾಗಿ ಮಾಡಿದೆ. ಈ ಎಜುಕೇಷನ್ ಎಕ್ಸ್‌ಪೋ ಕೂಡ ಯಶಸ್ಸು ಕಾಣಲಿ. ವಿದ್ಯಾರ್ಥಿಗಳಿಗೆ ವಿಜಯವಾಣಿ ಹಾಗೂ ದಿಗ್ವಿಜಯ ಉತ್ತಮ ಮಾರ್ಗದರ್ಶನ ನೀಡುವ ಕಾರ್ಯವನ್ನು ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಎಸ್‌ಡಿಎಂ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಸಾಯಿನಾಥ್ ಮಲ್ಲಿಗೆಮಾಡು ಮಾತನಾಡಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಎಂಬುದು ಅತ್ಯಂತ ಮುಖ್ಯವಾದದ್ದು. ಏನು ಓದಿದರೆ ನಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂಬ ಮಾಹಿತಿ ವಿದ್ಯಾರ್ಥಿ ಗಳಿಗೆ ದೊರೆಯಬೇಕು. ಅಂತಹ ಮಾಹಿತಿಯನ್ನು ನೀಡುವ ಕಾರ್ಯವನ್ನು ಎಜುಕೇಷನ್ ಎಕ್ಸ್‌ಪೋ ಮಾಡುತ್ತಿದೆ. ಇಲ್ಲಿ ಎಲ್ಲ ವಿದ್ಯಾಸಂಸ್ಥೆಗಳನ್ನು ಒಗ್ಗೂಡಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ವಿಆರ್‌ಎಲ್ ಮೀಡಿಯಾ ಪ್ರೈವೆಟ್ ಲಿಮಿಟೆಡ್‌ನ ಉಪಾಧ್ಯಕ್ಷ ಅರುಣ್ ಕರಡಿ, ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ನ ಪ್ರಧಾನ ವ್ಯವಸ್ಥಾಪಕ ಅಶೋಕ್, ವಿಜಯವಾಣಿ ಮೈಸೂರು ಆವೃತ್ತಿಯ ಸ್ಥಾನಿಕ ಸಂಪಾದಕ ಎಂ.ಆರ್. ಸತ್ಯನಾರಾಯಣ, ಜಾಹೀರಾತು ವಿಭಾಗದ ಹಿರಿಯ ವ್ಯವಸ್ಥಾಪಕ ದೀಪಕ್ ಘಾಟಕೆ ಹಾಗೂ ಇತರರು ಇದ್ದರು.

ಎಕ್ಸ್‌ಪೋಗೆ ಮೊದಲ ದಿನ ಉತ್ತಮ ಸ್ಪಂದನೆ

‘ವಿಜಯವಾಣಿ’ ಹಾಗೂ ದಿಗ್ವಿಜಯ ನ್ಯೂಸ್ ಚಾನಲ್ ಹಮ್ಮಿಕೊಂಡಿರುವ ಎಜುಕೇಷನ್ ಎಕ್ಸ್‌ಪೋಗೆ ಮೊದಲ ದಿನವಾದ ಶನಿವಾರ ಉತ್ತಮ ಸ್ಪಂದನೆ ದೊರೆಯಿತು. ಸಾಕಷ್ಟು ಸಂಖ್ಯೆಯಲ್ಲಿ ಪಾಲಕರು ಹಾಗೂ ವಿದ್ಯಾರ್ಥಿಗಳು ಆಗಮಿಸಿ ವಿವಿಧ ಕಾಲೇಜುಗಳಲ್ಲಿರುವ ಕೋರ್ಸ್‌ಗಳು ಹಾಗೂ ಕಾಲೇಜು ಕುರಿತು ಮಾಹಿತಿ ಪಡೆದರು. ಎಕ್ಸ್‌ಪೋ ಭಾನುವಾರವೂ ನಡೆಯಲಿದ್ದು, ಬೆಳಗ್ಗೆ 10 ರಿಂದ ರಾತ್ರಿ 8ರ ಅವಧಿಯಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರು ಭೇಟಿ ನೀಡಿ ಮಾಹಿತಿ ಪಡೆಯಬಹುದು. ಪ್ರವೇಶ ಉಚಿತವಾಗಿದೆ. ಎಕ್ಸ್‌ಪೋನಲ್ಲಿ ವಿವಿಧ ವಿಶ್ವ ವಿದ್ಯಾಲಯಗಳು, ಸಂಗೀತ ವಿಶ್ವ ವಿದ್ಯಾಲಯ, ವೈದ್ಯಕೀಯ ಮತ್ತು ತಾಂತ್ರಿಕ ಕಾಲೇಜುಗಳು, ಆಯುರ್ವೇದ ಕಾಲೇಜು, ಪಾಲಿಟೆಕ್ನಿಕ್, ಫ್ಯಾಷನ್ ಡಿಸೈನ್, ಆಯುರ್ವೇದ ಕಾಲೇಜು, ಆರ್ಕಿಟೆಕ್ಚರ್, ಬಿಸಿನೆಸ್ ಮ್ಯಾನೇಜ್‌ಮೆಂಟ್, ಸ್ಪರ್ಧಾತ್ಮಕ ಕೋಚಿಂಗ್ ಸೆಂಟರ್‌ಗಳು ಸೇರಿದಂತೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಣ ತಜ್ಞರು ಭಾಗವಹಿಸಿದ್ದಾರೆ.