ಅಥಣಿ ಗ್ರಾಮೀಣ: ವಿದ್ಯಾರ್ಥಿಗಳು ಸಾಮಾನ್ಯ ಜ್ಞಾನ ಹಾಗೂ ಅಗತ್ಯ ಮಾಹಿತಿಯುಳ್ಳ ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪಪ್ರಾಚಾರ್ಯ ಅನಿಲ ಮೇಲಿನಕೇರಿ ಹೇಳಿದರು.
ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆ ವಿತರಿಸಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಮಾಹಿತಿ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗಿದೆ ಎಂದು ತಿಳಿಸಿದರು.
ಶಿಕ್ಷಕರಾದ ಅಬ್ದುಲ್ ಹಮ್ಮೆದ, ಧರೆಪ್ಪ ನ್ಯಾಮಗೌಡ, ಆರತಿ ಪಾಟೀಲ, ಹೇಮಾ ಆದೇಪ್ಪನವರ, ಪ್ರೇಮಾ ನಾಯಿಕ, ಮೀನಾಕ್ಷಿ ಪಾಟೀಲ, ನಿಕಿತ ನಾಯಿಕವಾಡಿ, ಸಂತೋಷ ತಳಕೇರಿ, ರಾಜು ಕಾಂಬಳೆ ಇತರರು ಇದ್ದರು.