ಜಿಲ್ಲೆ

ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ವಿಜಯವಾಣಿ ವಿದ್ಯಾರ್ಥಿ ಮಿತ್ರ ಸಹಕಾರಿ; ಶಾಸಕ ಎಸ್.ಮುನಿರಾಜು ವಿಶ್ವಾಸ

ಪೀಣ್ಯ,ದಾಸರಹಳ್ಳಿ : ಶೈಕ್ಷಣಿಕ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ಇರುವುದರಿಂದ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ವಿಜಯವಾಣಿಯ ವಿದ್ಯಾರ್ಥಿಮಿತ್ರ ಪತ್ರಿಕೆ ಸಹಕಾರಿಯಾಗಲಿದೆ ಎಂದು ದಾಸರಹಳ್ಳಿ ಶಾಸಕ ಎಸ್. ಮುನಿರಾಜು ವಿಶ್ವಾಸ ವ್ಯಕ್ತಪಡಿಸಿದರು.

ನೆಲಗದರನಹಳ್ಳಿ ಗೃಹಲಕ್ಷ್ಮಿ ಬಡಾವಣೆಯ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜಯವಾಣಿ ವಿದ್ಯಾರ್ಥಿ ಹಾಗೂ ಉದ್ಯೋಗ ಮಿತ್ರ ಸಂಚಿಕೆಯನ್ನು ವಿತರಣೆ ಮಾಡಿ ಮಾತನಾಡಿದರು.

ಸಾಮಾಜಿಕ ಬದ್ಧತೆಯುಳ್ಳ ವಿಜಯವಾಣಿ ಪತ್ರಿಕೆಯು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ಮತ್ತು ಉದ್ಯೋಗ ಮಿತ್ರ ಪತ್ರಿಕೆ ಹೊರ ತಂದಿದೆ. ಸರ್ಕಾರ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಹಲವು ಖ್ಯಾತನಾಮರು ಸರ್ಕಾರಿ ಶಾಲೆಯಲ್ಲಿ ಓದಿ ಸಾಧನೆ ಮಾಡಿದ್ದಾರೆ. ನಿಮ್ಮ ಕನಸುಗಳೇ ನಿಮ್ಮನ್ನು ಯಶಸ್ಸಿನ ದಾರಿಯಲ್ಲಿ ಕೊಂಡೊಯ್ಯುತ್ತವೆ. ನಾನು ಸಹ ಸರ್ಕಾರಿ ಶಾಲೆಯಲ್ಲಿ ಓದಿ ಬೆಳೆದವನು. ಶಾಲೆ ಮತ್ತು ಮಕ್ಕಳ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕೈಗಾರಿಕೋದ್ಯಮಿ ಶಶಿರೆಡ್ಡಿ, ಶಂಕರ್, ಸಿ.ಆರ್.ಪಿ ಚಂದ್ರಶೇಖರ್, ಎಸ್.ಡಿ.ಎಂ.ಸಿ ಅಧ್ಯಕ್ಷೆ ಕೌಸಲ್ಯ, ಮುಖ್ಯಶಿಕ್ಷಕರಾದ ರಾಧಮಣಿ, ಕೃಷ್ಣಮೂರ್ತಿ, ಬಿಜೆಪಿ ಮುಖಂಡರಾದ ರವಿ ಮತ್ತಿತರರಿದ್ದರು.