ಬೆಳಗಾವಿ: ಶಾಲಾ-ಕಾಲೇಜು ವಿದ್ಯಾರ್ಥಿಗಳ ಜ್ಞಾನ ವೃದ್ಧಿಸುವಲ್ಲಿ ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆಯು ಪ್ರಮುಖ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಲ್ಲಮ್ಮನ ಬೆಳವಡಿ ಗ್ರಾಪಂ ಅಧ್ಯಕ್ಷ ಚಂದ್ರಶೇಖರಯ್ಯ ಕಾರೀಮನಿ ಹೇಳಿದರು. ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ಈಶಪ್ರಭು ಶಿಕ್ಷಣ ಸಂಸ್ಥೆಯ ವೀರರಾಣಿ ಮಲ್ಲಮ್ಮ ಸ್ಮಾರಕ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರ ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸದಾ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ನಂ.1 ದಿನಪತ್ರಿಕೆ ವಿಜಯವಾಣಿ ಕಾರ್ಯ ಶ್ಲಾಘನೀಯ ಎಂದರು.ಮಹಾವಿದ್ಯಾಲಯದ ಪ್ರಾಂಶುಪಾಲ ಎಂ.ಪಿ. ಉಪ್ಪಿನ, ಶಿಕ್ಷಕರಾದ ವಿರೇಶ ಕಾಡೇಶನವರ, ಉಜ್ವಲಾ ಪಾಟೀಲ, ಶೋಭಾ ಉದಗಟ್ಟಿ ಇತರದಿದ್ದರು.