ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾನುವಾರ ಭೇಟಿ ನೀಡಿ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರಗೆ ಶ್ರೀಮಠದ ಪೀಠಾಪತಿ ಡಾ.ಸುಬುಧೇಂದ್ರ ತೀರ್ಥರು ಸನ್ಮಾನಿಸಿ, ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಉಪಾಧ್ಯಕ್ಷ ಶರಣು ತರಿಕೇರಿ, ಶ್ರೀಮಠದ ವ್ಯವಸ್ಥಾಪಕ ಎಸ್.ಕೆ.ಶ್ರೀನಿವಾಸ ಉಪಸ್ಥಿತರಿದ್ದರು.