ಜಿಲ್ಲೆ

ವಿಜೃಂಭಣೆಯ ಅಡ್ಡಪಲ್ಲಕ್ಕಿ ಉತ್ಸವ

ಪ್ರಸಿನ್ ಕೆ.ಆರ್

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಣಕಟ್ಟೆ ಹೋಬಳಿ ಕಿತ್ತನಕೆರೆ ಗ್ರಾಮದಲ್ಲಿ ಗುರುವಾರ ಶ್ರೀ ಕ್ಷೇತ್ರ ಕುಪ್ಪುರು ಗದ್ದುಗೆ ಮಹಾ ಸಂಸ್ಥಾನ ಮಠದ ಶ್ರೀ ಗುರು ಮರುಳಸಿದ್ದೇಶ್ವರ ಸ್ವಾಮಿ ಬೆಳ್ಳಿ ಅಡ್ಡ ಪಲ್ಲಕಿ ಉತ್ಸವ ವಿಜೃಂಭಣೆಯಿಂದ ನೆರವೇರಿತು.

ಶುಕ್ರವಾರ ಬೆಳಗ್ಗೆ ಶ್ರೀ ಗುರು ಮರುಳಸಿದ್ದೇಶ್ವರ ಹಾಗೂ ಶ್ರೀ ಜೋಡಿ ಬಸವೇಶ್ವರ ಸ್ವಾಮಿಗೆ ಮಹಾರುದ್ರಾಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯ, ಮಹಾಮಂಗಳಾರತಿ ಜತೆಗೆ ಮಹಾದಾಸೋಹ ನೆರವೇರಿಸಲಾಯಿತು.