ಮುಂಡಗೋಡ: ಜಮೀನಿನ ಖಾತೆ ಬದಲಾವಣೆಗೆ ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿ ಗಿರೀಶ ರಣದೇವ ಅವರಿಗೆ ಲೋಕಾಯುಕ್ತ ನ್ಯಾಯಾಲಯ ನಾಲ್ಕು ವರ್ಷ ಕಠಿಣ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
2019ರಲ್ಲಿ ಹಳಿಯಾಳ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುವಾಗ ಜಮೀನಿನ ಖಾತೆ ಬದಲಾವಣೆ ಮಾಡಿ ಕೊಡಲು ರೈತರೊಬ್ಬರಿಂದ 3500 ರೂ.ಲಂಚ ಕೇಳಿದ್ದರು. ರೈತ 3 ಸಾವಿರ ರೂ. ನೀಡುವಾಗ ಲೊಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಗಿರೀಶ ರಣದೇವ ನಂತರ ಮುಂಡಗೋಡ ತಾಲೂಕಿಗೆ ವರ್ಗಾವಣೆಗೊಂಡಿದ್ದರು.
ಐದು ವರ್ಷ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ ನಾಲ್ಕು ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಕಾರವಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಆದೇಶ ನೀಡಿದ್ದಾರೆ.