ಗಂಗಾವತಿ ತಾಲೂಕಿನ ಬಸಾಪಟ್ಟಣದಲ್ಲಿ ಕಣ್ಣು ತಪಾಸಣೆ ಉಚಿತ ಶಿಬಿರವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷ ಆಂಜನೇಯಪ್ಪ, ವಲಯ ಮೇಲ್ವಿಚಾರಕ ಎಸ್.ಬಿ. ವಿಠ್ಠಲ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸುಧಾ ಇತರರಿದ್ದರು. 
ಜಿಲ್ಲೆ

ಹಳ್ಳಿಗರ ಆರೋಗ್ಯ ವೃದ್ಧಿಗೆ ಆದ್ಯತೆ

Kopala - Desk - Eraveni

ಗಂಗಾವತಿ: ಆರ್ಥಿಕ ಅಭಿವೃದ್ಧಿ ಜತೆಗೆ ಆರೋಗ್ಯ ಕಾಳಜಿಗೆ ಆದ್ಯತೆ ನೀಡಲಾಗುತ್ತಿದ್ದು, ಉಚಿತ ಶಿಬಿರಗಳ ಮೂಲಕ ಆರೋಗ್ಯ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ ಹೇಳಿದರು.

ತಾಲೂಕಿನ ಬಸಾಪಟ್ಟಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನಿಂದ ಸೋಮವಾರ ಹಮ್ಮಿಕೊಂಡಿದ್ದ ಕಣ್ಣು ತಪಾಸಣೆ ಉಚಿತ ಶಿಬಿರದಲ್ಲಿ ಮಾತನಾಡಿದರು. ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ಮೂಡಿಸಲಾಗುತ್ತಿದ್ದು, ಸಾಮಾಜಿಕ ಸೇವಾ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ. ಆರೋಗ್ಯ ಕಾಳಜಿ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಉಚಿತ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಗ್ರಾಪಂ ಅಧ್ಯಕ್ಷ ಆಂಜನೇಯಪ್ಪ ಮಾತನಾಡಿದರು. ಶಿಬಿರದಲ್ಲಿ 300ಕ್ಕೂ ಹೆಚ್ಚು ಜನರ ಕಣ್ಣು ತಪಾಸಿಸಿ ಚಿಕಿತ್ಸಾ ಸಲಹೆ ನೀಡಲಾಯಿತು. ವಲಯ ಮೇಲ್ವಿಚಾರಕ ಎಸ್.ಬಿ.ವಿಠ್ಠಲ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸುಧಾ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸ್ವಸಹಾಯ ಸಂಘದ ಸದಸ್ಯರಿದ್ದರು.