ಜಿಲ್ಲೆ

ವಸತಿಗೃಹದಲ್ಲಿ ಮಹಿಳೆ ಮೇಲೆ ದೌರ್ಜನ್ಯ

ಸೌಮ್ಯ ಆರ್

ಕಾಸರಗೋಡು: ವಿದೇಶದಲ್ಲಿ ಉದ್ಯೋಗಿಯಾಗಿರುವ ಸ್ನೇಹಿತನ ಪತ್ನಿಯನ್ನು ಕೋಯಿಕ್ಕೋಡಿನ ವಸತಿಗೃಹಕ್ಕೆ ಕರೆದೊಯ್ದು ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಮಹಿಳಾ ಠಾಣೆ ಪೊಲೀಸರು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಯುವಕನೊಬ್ಬನ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. 2024 ಡಿಸೆಂಬರ್‌ನಲ್ಲಿ ಘಟನೆ ನಡೆದಿದ್ದು, ಮಹಿಳೆಯ ಪತಿಯ ಸ್ನೇಹಿತ ಹಾಗೂ ಸಂಬಂಧಿಯಾಗಿರುವ ಯುವಕ ಕೃತ್ಯವೆಸಗಿದ್ದಾನೆ. ಮಾನಭಂಗ ಪ್ರಕರಣಕ್ಕೆ ಸಂಬಂಧಿಸಿ ಕೇಸ್ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.