- ವಿರಾಜಪೇಟೆ : ಕೊಡಗಿನ ಕೃಷಿಯೊಂದಿಗೆ ಸಂಸ್ಕೃತಿಯನ್ನೂ ಬಿಂಬಿಸುವ, ಕೊಡವ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಆಯೋಜಿಸಿದ್ದ ಕೆಸರು ಗದ್ದೆ ಕ್ರೀಡಾಕೂಟ ಬಿಟ್ಟಂಗಾಲದಲ್ಲಿ ಸಂಭ್ರಮವಾತಾವರಣ ಮೂಡಿಸಿತ್ತು.
ಜಬ್ಭೂಮಿ ಸಂಘಟನೆ, ರೂಟ್ಸ್ ಆಫ್ ಕೊಡಗು ಹಾಗೂ ವಿವಿಧ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಬಿಟ್ಟಂಗಾಲ ಗ್ರಾಮದ ನಾಯಡ ಕುಟುಂಬದ ಭತ್ತದ ಗದ್ದೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕ್ರೀಡಾಕೂಟದಲ್ಲಿ ನೂರಾರು ಕಿರಿಯರು, ಹಿರಿಯರು ಭಾಗವಹಿಸಿದ್ದರು.ಕೆಸರು ಗದ್ದೆಯಲ್ಲಿ ಮಿಂದೆದ್ದು ಕ್ರೀಡೋತ್ಸಾಹ ತೋರಿ ಹಲವು ಬಹುಮಾನದೊಂದಿಗೆ ಸಂಭ್ರಮಿಸಿದರು. 6 ವರ್ಷದ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರು ಉತ್ಸಾಹ ತೋರಿದ್ದು ವಿಶೇಷವಾಗಿತ್ತು. ಸಾಂಪ್ರದಾಯಿಕವಾಗಿ ಗೆಜ್ಜೆತಂಡ್ ಎದುರು ತಪ್ಪಡ್ಕಕಟ್ಟಿ ಕಾರ್ಯಕ್ರಮದ ಯಶಸ್ವಿಗೆ, ಕೊಡಗಿನ ಪ್ರಕೃತಿ, ಜೀವ ಜಲ, ಪರಂಪರೆಯ ಗತವೈಭವ ಮರುಕಳಿಸಲಿ ಎಂದು ಪ್ರಾರ್ಥಿಸಲಾಯಿತು.
ಪುಚ್ಚಿಮಂಡ ಬಬ್ಬುಲು, ಮಾಚೇಟ್ಟಿರ ಸುನಿಲ್ ತಂಡ ಕೋವಿಯಲ್ಲಿ 12 ಸುತ್ತಿನ ಗುಂಡು ಹಾರಿಸಿ,
ನಾಯಡ ಶ್ಯಾಮ್ ಸೋಮಣ್ಣ ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಬೇಲ್ ಪಣಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.