ಜಿಲ್ಲೆ

ಗೆಲ್ಲುವ ಅಭ್ಯರ್ಥಿಗಳ ಕುರಿತು ಎಐಸಿಸಿ ಮತ್ತು ಕೆಪಿಸಿಸಿ ಹಂತದಲ್ಲಿ 3- 4 ಸರ್ವೇ ಪೂರ್ಣ-ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ

Shravan Kumar Nala

ಮಂಗಳೂರು: ತಿಂಗಳಾಂತ್ಯದೊಳಗೆ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ. ಈಗಾಗಲೇ ಗೆಲ್ಲುವ ಅಭ್ಯರ್ಥಿಗಳ ಕುರಿತು ಎಐಸಿಸಿ ಮತ್ತು ಕೆಪಿಸಿಸಿ ಹಂತದಲ್ಲಿ 3- 4 ಸರ್ವೇ ಪೂರ್ಣಗೊಂಡಿದೆ. ಇದೇ ಏಳು ಮತ್ತು ಎಂಟರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು ಬಳಿಕ ಪಟ್ಟಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಗೆ ರವಾನೆಯಾಗಲಿದೆ ಎಂದು ಎಐಸಿಸಿ ಚುನಾವಣಾ ಸಮಿತಿ ಸದಸ್ಯ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಕಾಂಗ್ರೆಸ್ ಪರ ವಾತಾವರಣವಿದೆ. ಬಸವರಾಜ ಬೊಮ್ಮಾಯಿ ರಾಜ್ಯದ ಅತ್ಯಂತ ದುರ್ಬಲ ಮುಖ್ಯಮಂತ್ರಿಯಾಗಿದ್ದು, ಪ್ರತಿಯೊಂದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಯಸ್‌ಯಡಿಯೂರಪ್ಪ ಅವರ ಕಡೆ ಕೈ ತೋರಿಸುತ್ತಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜೈಲು ಸೇರಿ ಇತಿಹಾಸ ನಿರ್ಮಿಸಿದವರು. ರಾಜ್ಯದಲ್ಲಿ ಬಿಜೆಪಿಗೆ ಶಕ್ತಿ ತುಂಬಲು ಪದೇಪದೇ ರಾಜ್ಯಕ್ಕೆ ಭೇಟಿ ನೀಡುತ್ತಿರುವವರು ಈ ಹಿಂದೆ ಅಪರಾಧ ಚಟುವಟಿಕೆಗಳಿಗೆಗಾಗಿ ಜೈಲುವಾಸ ಅನುಭವಿಸಿದವರು. ಗುಜರಾತಿನಿಂದ ಗಡಿಪಾರಾದವರು ಎಂದರು.