Dr.Vishnuvardhan: ಕನ್ನಡದ ಪ್ರತಿಭಾನ್ವಿತ ನಟ, ಸಾಹಸಸಿಂಹ ಡಾ. ವಿಷ್ಣುವರ್ದನ್ ಅವರ ಸಮಾಧಿ ದಶಕಗಳಿಂದ ವಿವಾದಕ್ಕೆ ಸಿಲುಕಿರುವುದು ಬೇಸರದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯವಾಗಿ ಪೋಸ್ಟ್ ಹಂಚಿಕೊಂಡಿರುವ ವಿಜಯೇಂದ್ರ, ಅಭಿನವ ಭಾರ್ಗವ ವಿಷ್ಣುವರ್ಧನ್ ಮತ್ತು ಹಿರಿಯ ನಟ ಬಾಲಕೃಷ್ಣ ಅವರ ಸಮಾಧಿಗಳು ಆದಷ್ಟು ಬೇಗ ಅಭಿಮಾನ್ ಸ್ಟುಡಿಯೋದಲ್ಲಿಯೇ ಸ್ಮಾರಕ ರೂಪದಲ್ಲಿ ನಿರ್ಮಾಣವಾಗಲಿ ಎಂದು ಆಶಿಸಿದ್ದಾರೆ.
ಇದನ್ನೂ ಓದಿ:ಶಾಶ್ವತ ಮಿತ್ರರೂ ಇಲ್ಲ, ಶತ್ರುಗಳೂ ಇಲ್ಲ..ರಾಷ್ಟ್ರೀಯ ಹಿತಾಸಕ್ತಿಗಳು ಶಾಶ್ವತ! ರಾಜನಾಥ್ ಸಿಂಗ್..Rajnath Singh
ಈ ಹಿಂದೆ ಬಾಲಕೃಷ್ಣ ಅವರಿಗೆ ನೀಡಿದ್ದ ಜಾಗವನ್ನು ರಾಜ್ಯ ಸರ್ಕಾರ ಮರಳಿ ವಶಪಡಿಸಿಕೊಳ್ಳಲು ನಿರ್ಧರಿಸಿರುವುದು ಮತ್ತೆ ಹೊಸ ಗೊಂದಲಕ್ಕೆ ಕಾರಣವಾಗದಿರಲಿ, ಈ ವಿಷಯದಲ್ಲಿ ಸರ್ಕಾರ ಹಿರಿಯ ನಟರ ಅಭಿಮಾನಿಗಳ ಮನಸ್ಸಿಗೆ ಘಾಸಿಯಾಗದಂತೆ ನಡೆದುಕೊಳ್ಳಲಿ ಎಂದು ಪೋಸ್ಟ್ ಮಾಡಿದ್ದಾರೆ.
ವಿವಾದವೇನು..?
ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿತ್ತು, ಇದರಿಂದ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು.
ಅಭಿಮಾನ್ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಂಡು ಅದನ್ನು ಅರಣ್ಯ ಭೂಮಿ ಎಂದು ಘೋಷಿಸಲು ಸರ್ಕಾರ ಚಿಂತನೆ ಮಾಡಿದೆ. ಈ ಬಗ್ಗೆ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದ್ದು, ತಮ್ಮ ಫೇಸ್‌ಬುಕ್‌ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.