ಜಿಲ್ಲೆ

ವಿಶ್ವಮಾನವ ದಿನಾಚರಣೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಡಿ. 29ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಬೆಳಗಾವಿ ಜಿಲ್ಲೆಯ ಸಂಕೇಶ್ವರದ ಸಾಹಿತಿ ಡಾ. ಗುರುಪಾದ ಮರೆಗುದ್ದಿ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.