ಜಿಲ್ಲೆ

ಸೆ.22ರಂದು ಸರ್ವ ಸದಸ್ಯರ ಸಭೆ: ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಮಾಹಿತಿ

ಮಂಡ್ಯ: ವಿಶ್ವಜ್ಞಾನಿ ನೌಕರರ ಅಭಿವೃದ್ಧಿ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸೆ.22ರಂದು ಬೆಳಗ್ಗೆ 11 ಗಂಟೆಗೆ ನಗರದ ವೈಷ್ಣವಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ತಿಳಿಸಿದರು.

ಸಭೆಯನ್ನು ಮೈಸೂರಿನ ಬಹುಜನಪೀಠ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿಗಳು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ನಿವೃತ್ತ ಅಧೀಕ್ಷಕ ಇಂಜಿನಿಯರ್ ಚಂದ್ರಹಾಸ್, ವಕೀಲ ಎಂ.ಬಿ.ಹರಿಪ್ರಸಾದ್, ಅಂಬೇಡ್ಕರ್ ವಿಚಾರವಾದಿ ಎಂ.ಕೃಷ್ಣಮೂರ್ತಿ ಭಾಗವಹಿಸಲಿದ್ದಾರೆ. ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳು ಹಾಗೂ ಸದಸ್ಯರನ್ನು ಗೌರವಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಂಘದ ನಿರ್ದೇಶಕರಾದ ಸಿ.ರಮೇಶ್, ಕೆ.ಮೋಹನ್‌ಕುಮಾರ್ ಇದ್ದರು.