ಜಿಲ್ಲೆ

ಎನ್‌ಡಿಎ ಮೈತ್ರಿಕೂಟಕ್ಕೆ ವಿಶ್ವಕರ್ಮ ಸಮಾಜ ಬೆಂಬಲ

ಅವಿನಾಶ್ ಜೈನಹಳ್ಳಿ

ಮೈಸೂರು: ಅಖಿಲ ಭಾರತ ವಿಶ್ವಕರ್ಮ ಮಹಾಸಂಘದ ವತಿಯಿಂದ ಲೋಕಸಭಾ ಚುನಾವಣೆ ವೇಳೆ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡುವುದಾಗಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಜಯಂತ್ ತಿಳಿಸಿದರು.

ವಿಶ್ವಕರ್ಮ ಸಮಾಜ ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ನಾನಾ ಕಾರ್ಯಕ್ರಮ ರೂಪಿಸಿದ್ದಾರೆ. ಜತೆಗೆ ನಮ್ಮ ಸಮಾಜಕ್ಕೆ ಬೆಂಬಲ ನೀಡುತ್ತಾರೆಂಬ ನಂಬಿಕೆ ಇದೆ. ಮೋದಿ ಅವರು ವಿಶ್ವಕರ್ಮ ಸಮ್ಮಾನ್ ಯೋಜನೆ ನೀಡುವ ಮೂಲಕ ಮನ್ನಣೆ ನೀಡಿ, ಸಮಾಜದ ಕಾಯಕವನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಯೋಧ್ಯ ಶ್ರೀರಾಮನ ವಿಗ್ರಹ ಕೆತ್ತನೆ ಮಾಡಲು ಸಮಾಜದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಅವಕಾಶ ನೀಡುವ ಮೂಲಕ ನಮ್ಮ ಸಮಾಜದ ಕೀರ್ತಿಯನ್ನು ರಾಷ್ಟ್ರ ಹಾಗೂ ವಿಶ್ವಕ್ಕೆ ತೋರಿಸುವ ಕೆಲಸ ಮಾಡಿದ್ದಾರೆ. ಹೀಗಾಗಿ ಬಿಜೆಪಿಗೆ ಬೆಂಬಲ ನೀಡಲಾಗುವುದೆಂದರು. ಮುಖಂಡರಾದ ಕಾರ್ತಿಕ್, ಬಿ.ಆರ್. ದೀಕ್ಷಿತಾ ಇದ್ದರು.