ಜಿಲ್ಲೆ

ಮೈಸೂರಿನಲ್ಲಿ ವಿಶ್ವೇಶ್ವರಯ್ಯ ಜಯಂತಿ ಆಚರಣೆ

Mysuru

ಮೈಸೂರು: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಶಿಸ್ತು, ಪ್ರಾಮಾಣಿಕತೆ ಮತ್ತು ಬದ್ಧತೆ ಅನುಕರಣೀಯ ಎಂದು ಕರ್ನಾಟಕ ಮುಕ್ತಕ ಸಾಹಿತ್ಯ ಅಕಾಡೆಮಿ ಗೌರವಾಧ್ಯಕ್ಷ ಎಸ್. ರಾಮಪ್ರಸಾದ್ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಹಾರಾಣಿ ಪ್ರಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಏರ್ಪಡಿಸಿದ್ದ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ ಸಮಯಕ್ಕೆ ಬಹಳ ಬೆಲೆ ಕೊಡುತ್ತಿದ್ದರು. ಅವರ ವ್ಯಕ್ತಿತ್ವವನ್ನು ಶಿಸ್ತಿನಿಂದ ರೂಪಿಸಿಕೊಂಡಿದ್ದರು. ದಿವಾನರಾಗಿದ್ದ ಸಂದರ್ಭದಲ್ಲಿ ಪ್ರಾಮಾಣಿಕತೆಯಿಂದ ಜನ ಕಲ್ಯಾಣಕ್ಕಾಗಿ ಕೆಲಸ ಮಾಡಿದರು ಎಂದರು.

ಪ್ರಾಂಶುಪಾಲ ಬಿ.ವಿ. ನಂಜುಂಡಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕಾರ್ಯದರ್ಶಿ ಮ.ನ. ಲತಾ ಮೋಹನ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಉಪನ್ಯಾಸಕರಾದ ಸತೀಶ್, ನಂದೀಶ್, ರಂಗಕರ್ಮಿ ರಾಜಶೇಖರ ಕದಂಬ, ಕನ್ನಡ ಚಳವಳಿಗಾರ ಮೂಗೂರು ನಂಜುಂಡಸ್ವಾಮಿ ಹಾಗೂ ಇತರರು ಇದ್ದರು.