ಕುಶಾಲನಗರ:
ಕೇಂದ್ರ ಪುರಸ್ಕೃತ ಯೋಜನೆಗಳಾದ ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್, ಗ್ರಾಮೀಣ ಯೋಜನೆಗಳ ಪ್ರಗತಿಯ ಕುರಿತು ಮೌಲ್ಯಮಾಪನ ಮಾಡಲು ನೀತಿ ಆಯೋಗದ ಡೆವಲಪ್‌ಮೆಂಟ್ ಮಾನಿಟರಿಂಗ್ ಮತ್ತು ಇವಾಲ್ಯುವೇಷನ್ ತಂಡವು ಹಿರಿಯ ಅಧಿಕಾರಿ ನಿತಿನ್ ನೇತೃತ್ವದಲ್ಲಿ ಸೋಮವಾರ ಜಿಲ್ಲೆಗೆ ಆಗಮಿಸಿ ಕುಶಾಲನಗರ ತಾಲೂಕು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯಲ್ಲಿ ಪರಿಶೀಲನೆ ನಡೆಸಿತು
ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಈ ತನಕ ಸಾಧಿಸಿರುವ ಘಟಕವಾರು ಭೌತಿಕ ಮತ್ತು ಆರ್ಥಿಕ ಪ್ರಗತಿ ವಿವರ ಪರಿಶೀಲಿಸಿದ ತಂಡ ಸ್ವಚ್ಛ ಸಂಕೀರ್ಣ ಘಟಕ ಕಸ ವಿಲೇವಾರಿ ವಿಧಾನಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಪೂರೈಕೆ ಕ್ರಮಗಳ ಬಗ್ಗೆ ಹಾಗೂ ನಿಯಮಿತ ನೀರಿನ ಗುಣಮಟ್ಟ ತಪಾಸಣೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿತು.
ನಂತರ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದಸ್ಯರೊಂದಿಗೆ ನಡೆದ ಸಂವಾದ ಕಾರ್ಯಕ್ರಮ ದಲ್ಲಿ ಸ್ಥಳೀಯ ಸಂಸ್ಥೆಗಳು ತಳಮಟ್ಟದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷ ಪ್ರವೀಣ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮೇಶ್, ಸ್ವಚ್ಛ ಭಾರತ್ ಜಿಲ್ಲಾ ನೋಡಲ್ ಅಧಿಕಾರಿ ಹರ್ಷಿತ, ಗ್ರಾಮೀಣ ಕುಡಿಯುವ ನೀರು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ವೀರೇಂದ್ರ, ಜಲಜೀವನ್ ಮತ್ತು ಸ್ವಚ್ಛ ಭಾರತ್ ಘಟಕದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.