ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿರುವ ಬಿ.ವೈ.ವಿಜಯೇಂದ್ರ ಅವರು ಸೋಮವಾರ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ, ಶ್ರೀ ಸೋಮನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಇದೇ ವೇಳೆ ಬಿ.ವೈ.ವಿಜಯೇಂದ್ರ ಅವರನ್ನು ಜಿಲ್ಲಾ ಒಕ್ಕಲಿಗ ಮುಖಂಡರು ಸನ್ಮಾನಿಸಿದರು.
ನಗರಪಾಲಿಕೆ ಮಾಜಿ ಸದಸ್ಯ, ಜಿಲ್ಲಾ ಒಕ್ಕಲಿಗ ಸಂಘದ ನಿರ್ದೇಶಕ ಪ್ರಶಾಂತ್‌ಗೌಡ, ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೇಮಂತ್‌ಕುಮಾರ್ ಗೌಡ, ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ರಾಜ್‌ಕುಮಾರ್, ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಗೋಕುಲ್ ಗೋವರ್ಧನ್, ಮುಡಾ ಮಾಜಿ ಸದಸ್ಯೆ ಲಕ್ಷ್ಮೀ, ಬಿಜೆಪಿ ನಗರದ ಯುವ ಮೋರ್ಚಾ ಅಧ್ಯಕ್ಷ ಕಿರಣ್‌ಗೌಡ, ರಾಕೇಶ ರಾಮೇಗೌಡ , ಪುನೀತ್‌ಗೌಡ ಇದ್ದರು.