ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಸಹಸ್ರನಾಳಿಕೇರ ಗಣಪತಿ ಯಾಗದಲ್ಲಿ ಕುಟುಂಬ ಸಮೇತರಾಗಿ ಭಾಗಿಯಾದರು 
ಜಿಲ್ಲೆ

ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

ಕೋಟ: ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಸಹಸ್ರನಾಳಿಕೇರ ಗಣಪತಿ ಯಾಗದಲ್ಲಿ ಕುಟುಂಬ ಸಮೇತರಾಗಿ ಭಾಗಿಯಾದರು.

ಈ ಸಂದರ್ಭ ಮಾತನಾಡಿ, ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಒಟ್ಟಾಗಿ ಶ್ರಮಿಸುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ನಿರಾಸೆ ಆಗಲಿದೆ. ಅವರು ನಂಬಿಕೊಂಡ ಗ್ಯಾರಂಟಿ ಅವರ ಕೈ ಹಿಡಿಯಲ್ಲ ಎಂದರು.

ಕಿರಣ್‌ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಕ್ಷೇತ್ರಾಧ್ಯಕ್ಷ ಸುರೇಶ ಶೆಟ್ಟಿ, ಮಂಗಳೂರು ಪ್ರಭಾರಿ ರಾಜೇಶ್ ಕಾವೇರಿ ಇದ್ದರು.