ಜಿಲ್ಲೆ

ತಲಕಾವೇರಿಗೆ ಭೇಟಿ, ವಿಶೇಷ ಪೂಜೆ

ಆದರ್ಶ್. ಎಂ.ಕೆ.

ಮಡಿಕೇರಿ: ನಾಡಿನ ಜೀವನದಿ, ಕಾವೇರಿ ಉಗಮಸ್ಥಾನ ತಲಕಾವೇರಿ ಹಾಗೂ ಪವಿತ್ರ ಕ್ಷೇತ್ರ ಶ್ರೀಭಗಂಡೇಶ್ವರ ದೇವಾಲಯಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮತ್ತು ಕುಟುಂಬದವರು ಬುಧವಾರ ಭೇಟಿ ನೀಡಿ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.

ಎ.ಎಸ್.ಪೊನ್ನಣ್ಣ ಅವರ ೫೧ನೇ ಜನ್ಮ ದಿನದ ಪ್ರಯುಕ್ತ ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಮಹಾಸಂಕಲ್ಪ ಪ್ರಾರ್ಥನೆ ಸಲ್ಲಿಸಿದರು. ಮೊದಲಿಗೆ ಮಹಾ ಗಣಪತಿಗೆ ಪೂಜೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ನಾಡಿನ ಎಲ್ಲರಲ್ಲಿ ಸಮೃದ್ಧಿ, ಸಂತಸ ತರುವಂತಾಗಲಿ ಎಂದು ಪ್ರಾರ್ಥಿಸಿದರು, ನಂತರ ಮಹಾವಿಷ್ಣು ಮತ್ತು ಸುಬ್ರಮಣ್ಯ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಲಕಾವೇರಿಗೆ ತೆರಳಿ ಕುಂಕುಮಾರ್ಚನೆ ಪೂಜೆ ಸಲ್ಲಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಎ.ಎಸ್.ಪೊನ್ನಣ್ಣ ಅವರ ಧರ್ಮಪತ್ನಿ ಕಾಂಚನ್, ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ದೇವಾಲಯ ಸಮಿತಿ ಮಾಜಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ ಇತರರು ಇದ್ದರು.