ಜಿಲ್ಲೆ

ಸೀತಾಂಗೋಳಿಯಲ್ಲಿ ವಿಶ್ವೇಶ್ವರಯ್ಯ ಜನ್ಮದಿನಾಚರಣೆ

ಸೌಮ್ಯ ಆರ್

ಕುಂಬಳೆ: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲೊಬ್ಬರಾದ ಸರ್ ಎಂ.ವಿಶ್ವೇಶ್ವರಯ್ಯ 165ನೇ ಜನ್ಮದಿನಾಚರಣೆ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಟಕ ಆಶ್ರಯದಲ್ಲಿ ಸೀತಾಂಗೋಳಿ ವಕೀಲ ಥೋಮಸ್ ಡಿಸೋಜ ಕಾರ್ಯಾಲಯದಲ್ಲಿ ಸೋಮವಾರ ನಡೆಯಿತು.

ಸಿರಿಗನ್ನಡ ವೇದಿಕೆ ಅಧ್ಯಕ್ಷ ವಿ.ಬಿ.ಕುಳಮರ್ವ ಉಪನ್ಯಾಸ ನೀಡಿದರು. ಕ.ಸಾ.ಪ. ಕೇರಳ ಗಡಿನಾಡ ಟಕದ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಅಧ್ಯಕ್ಷತೆ ವಹಿಸಿದ್ದರು. ಸಾಹಿತಿಗಳಾದ ಥೋಮಸ್ ಡಿಸೋಜ, ಬಾಲ ಮಧುರಕಾನನ, ಪತ್ರಕರ್ತ ಪುರುಷೋತ್ತಮ ಭಟ್ ಶುಭಾಶಂಸನೆಗೈದರು. ಕ.ಸಾ.ಪ. ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ವಂದಿಸಿದರು.