ಜಿಲ್ಲೆ

ಅಭಿವೃದ್ಧಿಗೆ ಅತ್ಯಽಕ ಅನುದಾನ ಬಿಡುಗಡೆ - ಶಾಸಕ ಅಶೋಕ್ ರೈ ಮಾಹಿತಿ

Mangaluru - Nishantha Narayana


ವಿಟ್ಲ: ಪಟ್ಟಣ ಪಂಚಾಯಿತಿ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರಿ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅನೇಕ ವರ್ಷಗಳಿಂದ ಆಗದೆ ಇರುವ ರಸ್ತೆಗಳಿಗೆ ಈ ಬಾರಿ ಕಾಂಕ್ರೀಟ್ ಭಾಗ್ಯ ದೊರಕಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಯಾದ ಬಳಿಕ ಅಭಿವೃದ್ಧಿ ಕಾಮಗಾರಿಗೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ ಎಂಬುದು ಬಿಜೆಪಿಗರ ಸುಳ್ಳು ಪ್ರಚಾರ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.


ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ೨.೫೮ ಕೋಟಿ ರೂ. ಅನುದಾನದಲ್ಲಿ ರಸ್ತೆ ಹಾಗೂ ವಿವಿಧ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು ಮಾತನಾಡಿದರು.


ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ದಿನದ ೨೪ ಗಂಟೆಯೂ ಶುದ್ಧ ಕುಡಿಯುವ ನೀರು ನೀಡುವ ಯೋಜನೆಗೆ ಜಾರಿಗೆ ತರಲಾಗಿದೆ. ಫಿಲ್ಟರ್ ನೀರು ನೀಡುವುದಕ್ಕಾಗಿ ೧೦೦ ಕೋಟಿ ರೂ.ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಜನ ನೆಮ್ಮದಿಯಿಂದ ಇದ್ದಾರೆ. ನಾವು ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಮೋಸ ಮಾಡುವುದಿಲ್ಲ. ಹೇಳಿದ್ದನ್ನು ಮಾಡಿಯೇ ಮಾಡುತ್ತೇವೆ ಎಂದು ಹೇಳಿದರು.


ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎಸ್. ಮಹಮ್ಮದ್, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮನಾಭ ಪೂಜಾರಿ, ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ, ಡಾ.ರಾಜಾರಾಮ್ ಕೆ. ಬಿ., ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ವಿಕೆಎಂ ಅಶ್ರಫ್, ಹಸೈನಾರ್ ನೆಲ್ಲಿಗುಡ್ಡೆ, ಡೀಕಯ್ಯ, ಲತಾವೇಣಿ, ಪದ್ಮಿನಿ, ನಾಮ ನಿರ್ದೇಶನ ಸದಸ್ಯರಾದ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಶ್ರೀನಿವಾಸ್ ಶೆಟ್ಟಿ, ಸುನೀತಾ ಕೋಟ್ಯಾನ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಭವಾನಿ ರೈ ಕೊಲ್ಯ, ಬೂತ್ ಅಧ್ಯಕ್ಷರಾದ ವಿಕೆಎಂ ಹಂಝ, ಅಬ್ದುಲ್ ರಹಿಮಾನ್ ಕುರುಂಬಳ, ಎಂ.ಕೆ ಮೂಸಾ, ಶೇಕ್ ಅಲಿ, ಮನೋಹರ ಲ್ಯಾನ್ಸಿ ಡಿ ಸೋಜ, ಎಸ್.ಕೆ ಮೊಹಮ್ಮದ್ ಉಪಸ್ಥಿತರಿದ್ದರು.