ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜ್ ನಲ್ಲಿ ಸಿಇಟಿ, ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಚಾಲನೆ ನೀಡಿದರು. ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು.ಕೋಶಾಧಿಕಾರಿ ಬಾಬು ಕೆ.ವಿ , ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ನಿತ್ಯಾನಂದ ನಾಯಕ್, ಪದ್ಮಯ್ಯ ಗೌಡ ಉಪಸ್ಥಿತರಿದ್ದರು. ಪ್ರಕಾಶ್ ನಾಯಕ್ ಸ್ವಾಗತಿಸಿದರು. ಪ್ರಮೀಳಾ ಕೆ.ಆರ್ ನಿರೂಪಿಸಿದರು. ರೂಪಾರ್ಶಿ ವಂದಿಸಿದರು. ಹಿತಾ ಪ್ರಾರ್ಥಿಸಿದರು.