ಹುಬ್ಬಳ್ಳಿ: ವಿದ್ಯಾರ್ಥಿಗಳು ತಮ್ಮ ಗುರುಗಳ ಮೂಲಕ ಹೆಚ್ಚಿನ ಜ್ಞಾನ ಗಳಿಸಿಕೊಂಡು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕೆಂದು ವಿವೇಕ ಜಾಗ್ರತ ಬಳಗದ ದ ಸೇವಕಿ ಡಾ. ಪಂಕಜಾ ಬ್ಯಾಕೋಡಿ ಹೇಳಿದರು.
ಇಲ್ಲಿಯ ಎಸ್ಜೆಎಂವಿ ಕಲಾ ಹಾಗೂ ವಾಣಿಜ್ಯ ಮಹಿಳಾ ವಿದ್ಯಾಲಯ ಕನ್ನಡ ವಿಭಾಗ ಮತ್ತು ವಿವೇಕ ಜಾಗ್ರತ ಬಳಗ ಹಾಗೂ ಡಾ. ಡಿ.ಎಸ್. ಕಕಿರ್ ಸಾಹಿತ್ಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಧಾರವಾಡ ಜಿಲ್ಲಾ ಪದವಿಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ತ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಾಧನೆಗಳ ರಸ ಪ್ರಶ್ನೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಬೇರೆಯವರೊಂದಿಗೆ ಹೋಲಿಸಿಕೊಳ್ಳಬಾರದು. ಇತರರ ದೋಷಗಳನ್ನು ಹುಡುಕದೆ, ಸಮಾಜ ಮುಖಿಯಾಗಿ ಕಾರ್ಯ ಮಾಡುವದನ್ನು ರೂಢಿಸಿಕೊಳ್ಳಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಸಿಸಿಲಿಯಾ ಡಿಕ್ರೂಜ್ ಮಾತನಾಡಿ, ವಿದ್ಯಾರ್ಥಿಗಳು ಮಹಾತ್ಮರ ಮತ್ತು ಚಿಂತಕರ ಜೀವನ ಚರಿತ್ರೆಗಳನ್ನು ಓದಬೇಕು. ಪ್ರತಿಯೊಂದು ವಿಷಯದ ಕುರಿತು ಆಸಕ್ತಿ ಹೊಂದಿರಬೇಕು ಎಂದರು.
ನಿವೃತ್ತ ಗ್ರಂಥಪಾಲಕ ಡಾ. ಬಿ.ಎಸ್. ಮಾಳವಾಡ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿವ್ಯಾ ಜೋಳನಗೌಡರ ಪರಿಚಯಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸುಪ್ರಿಯಾ ಮಲಶೆಟ್ಟಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು. ಉಪನ್ಯಾಸಕಿ ಡಾ. ಮಮತಾಜ ತಾಸಿಲ್ದಾರ್ ಕಾರ್ಯಕ್ರಮ ನಿರೂಪಿಸಿದರು. ವಾಣಿ ಕಟಗೇರಿ ವಂದಿಸಿದರು.
ಸಹಾಯಕ ಪ್ರಾಧ್ಯಾಪಕ ಡಾ. ಗುರುರಾಜ ನವಲಗುಂದ ಮತ್ತು ವಿವೇಕ ಜಾಗತ ಬಳಗದ ಅಧ್ಯೆ ಸುಚೇತನಾ ಬೇವಿನಕಟ್ಟಿ ಉಪಸ್ಥಿತರಿದ್ದರು.
ಧಾರವಾಡ ಜಿಲ್ಲೆಯ 20ಕ್ಕೂ ಹೆಚ್ಚು ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬಳಗದ ವತಿಯಿಂದ ಪುಸ್ತಕ ಮತ್ತು ನಿಯತಕಾಲಿಕೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ಫರಾ ಜಾಬಿನ ಮುನ್ಷಿ, ಮಹಿಳಾ ವಿದ್ಯಾಪಿಠ ಪ್ರಥಮ, ಲಕ್ಷ್ಮೀ ಮುದಿಗೌಡರ, ಎಸ್ಜೆಎಂವಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ದ್ವೀತಿಯ, ನಂದಿತಾ ವಿಂಜಮೂರ ತೃತೀಯ ಬಹುಮಾನ ಪಡೆದರು.