ಅರಸೀಕೆರೆ : ತಾಲೂಕಿನ ಕಣಕಟ್ಟೆ ಗ್ರಾಮದ ವಿದ್ಯಾರಣ್ಯ ಪದವಿ ಪೂರ್ವ ಕಾಲೇಜು, ಕೈಗಾರಿಕಾ ತರಬೇತಿ ಕೇಂದ್ರ, ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟದ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದರ 161 ನೇ ಜಯಂತಿ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರಣ್ಯ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎ.ನಾಗೇಶರಾವ್ ಮಾತನಾಡಿ, ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಮರೆಯಬಾರದು. ನಿಸ್ವಾರ್ಥ ಸೇವೆಯ ಮೂಲಕ ರಾಷ್ಟ್ರದ ಪುನರ್ ನಿರ್ಮಾಣಕ್ಕೆ ನೆರವಾಗಬೇಕು. ಇದಕ್ಕೆ ಸ್ವಾಮಿ ವಿವೇಕಾನಂದರು ತತ್ವಾದರ್ಶ ಅನುಸರಿಸಬೇಕು ಎಂದರು. ಪಂಚನಹಳ್ಳಿ ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲ ಡಾ.ಡಿ.ಬಿ.ದೇವರಯ್ಯ ಮಾತನಾಡಿದರು. ಪ್ರಾಂಶುಪಾಲರಾದ ಕೆ.ಎ ಶಶಿಕುಮಾರ್, ಪುಟ್ಟರಂಗಪ್ಪ , ಎನ್‌ಎಸ್‌ಎಸ್ ಅಧಿಕಾರಿ ಪ್ರಕಾಶ್ ಇನ್ನಿತರರು ಹಾಜರಿದ್ದರು.