ಬಳ್ಳಾರಿಯಲ್ಲಿ ಸ್ವಾಮಿ ವಿವೇಕಾನಂದರ 161ನೇ ಜಯಂತ್ಯುತ್ಸವದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ವಿವೇಕ ಟ್ರೋಫಿ ಪಂದ್ಯಾವಳಿಯಲ್ಲಿ ಆರ್‌ವೈಎಂಇ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಅಂತಿಮವಾಗಿ ವಿಜೇತರಾಗಿ, ರಾಜ್ಯಮಟ್ಟಕ್ಕೆ ಆಯ್ಕೆಯಾದರು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ರಾಂಪುರ ವಿನೋದ, ರಾಮ್‌ಕಿರಣ್, ಜಗದೀಶ್, ಪೋಲಾ ಸುಜಾತಾ ಇನ್ನಿತರರಿದ್ದರು.  
ಜಿಲ್ಲೆ

ಆರ್‌ವೈಎಂಇ ಕಾಲೇಜು ತಂಡಕ್ಕೆ ವಿವೇಕ ಟ್ರೋಫಿ

Bellari - Heera Nayak

ಬಳ್ಳಾರಿ: ಸ್ವಾಮಿ ವಿವೇಕಾನಂದರ 161ನೇ ಜಯಂತ್ಯುತ್ಸವದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬಳ್ಳಾರಿಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ವಿವೇಕ ಟ್ರೋಫಿ ಪಂದ್ಯಾವಳಿಯಲ್ಲಿ ಆರ್‌ವೈಎಂಇ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಅಂತಿಮವಾಗಿ ವಿಜೇತರಾಗಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದ ವಿವೇಕ ಟ್ರೋಫಿ-2024 ಪ್ರಯುಕ್ತ ಮಹಿಳೆಯರಿಗಾಗಿ ಥ್ರೋಬಾಲ್, ಪುರುಷರಿಗಾಗಿ ವಾಲಿಬಾಲ್ ಪಂದ್ಯಾವಳಿಗಳನ್ನು ಬಳ್ಳಾರಿ ನಗರದ ಶೆಟ್ರಗುರುಶಾಂತಪ್ಪ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟಕರಾಗಿ ಗಾಂಧಿನಗರ ಪೊಲೀಸ್ ಠಾಣೆ ಪಿಎಸ್‌ಐ ಸಿದ್ದರಾಮೇಶ್ವರ, ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಹ ಕಾರ್ಯದರ್ಶಿ ರಾಂಪುರ ವಿನೋದ, ರಾಮ್‌ಕಿರಣ್, ಜಗದೀಶ್, ಪೋಲಾ ಸುಜಾತಾ ಹಾಗೂ ವಿದ್ಯಾರ್ಥಿ ಪರಿಷತ್ತಿನ ಹಿರಿಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ನಗರ 12 ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು ಎಂದು ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಹುಲೇಶ್ ತಿಳಿಸಿದ್ದಾರೆ.