ಜಿಲ್ಲೆ

ಸ್ವಾಮಿ ವಿವೇಕಾನಂದರ ರಸಪ್ರಶ್ನೆ ಸ್ಪರ್ಧೆ

Dharwada - Basavaraj Idli

ಹುಬ್ಬಳ್ಳಿ: ಇಲ್ಲಿಯ ಎಸ್ ಜೆಎಂವಿ ಕಲಾ, ವಾಣಿಜ್ಯ ಮಹಿಳಾ ವಿದ್ಯಾಲಯ ಕನ್ನಡ ವಿಭಾಗ ಮತ್ತು ವಿವೇಕ ಜಾಗತ ಬಳಗ ಹಾಗೂ ಡಾ. ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಧಾರವಾಡ ಜಿಲ್ಲಾ ಪದವಿ ಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ತ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಾಧನೆಗಳ ಕುರಿತು ರಸಪ್ರಶ್ನೆ ಉಚಿತ ಸ್ಪರ್ಧೆಯನ್ನು ಜ. 11ರಂದು ಬೆಳಗ್ಗೆ 11ಕ್ಕೆ ಜಯಚಾಮರಾಜ ನಗರದ ಮಹಿಳಾ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮಮಹಾವಿದ್ಯಾಲಯದ ಗುರುತಿನ ಪತ್ರ ಮತ್ತು ಆಧಾರ ಕಾರ್ಡ್ ನೊಂದಿಗೆ ಸ್ಪರ್ಧೆಗೆ ಹಾಜರಾಗಿ 50 ಬಹು ಆಯ್ಕೆ ರಸ ಪ್ರಶ್ನೆಗಳಿಗೆ ಉತ್ತರಿಸಬಹುದು.

ಜ. 9ರ ಒಳಗಾಗಿ ಹೆಸರು ನೋಂದಾಯಿಸಬೇಕು. ಒಂದು ಮಹಾವಿದ್ಯಾಲಯದಿಂದ ಮೂವರು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ವಿಜೇತರಿಗೆ ಪ್ರಥಮ, ದ್ವೀತಿಯ, ತೃತೀಯ ನಗದು ಬಹುಮಾನ, ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮಹಾವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸುಪ್ರಿಯಾ ಎಂ., ವಿವೇಕ ಜಾಗತ ಬಳಗದ ಸೇವಾಶ್ರೀ ಡಾ. ಬಿ.ಎಸ್. ಮಾಳವಾಡ ಅವರನ್ನು ಸಂಪರ್ಕಿಸಬಹುದು ಎಂದು ಪ್ರಾಚಾರ್ಯ ಡಾ. ಸಿಸಿಲಿಯಾ ಡಿಕ್ರೂಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.