ಬಳ್ಳಾರಿ: ಯುವಕರಿಗೆ ಸ್ಪೂರ್ತಿಯ ಚಿಲುಮೆಯಾಗಿದ್ದ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಎಂದೆಂದಿಗೂ ಜೀವಂತ ಎಂದು ಶ್ರೀಮೇಧಾ ಕಾಲೇಜಿನ ಪ್ರಾಚಾರ್ಯ ರಾಮ್ ಕಿರಣ್ ಹೇಳಿದರು.
ಇದನ್ನೂ ಓದಿ:ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಲಿ
ನಗರದ ಶ್ರೀಮೇಧಾ ಪದವಿ ಪೂರ್ವ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ, ಚಿಗುರು ಕಲಾ ತಂಡದಿಂದ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ವಾಮಿ ವಿವೇಕಾನಂದರು ಜೀವನ ಚರಿತ್ರೆ ಮತ್ತು ಸಾಧನೆ ಕುರಿತು ಯುವಕರು ತಿಳಿದುಕೊಳ್ಳಬೇಕು. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ದಿವ್ಯವಾಣಿಯ ಜ್ಞಾನ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.