ಕುಶಾಲನಗರ:
ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿರುವ ಹುಲುಸೆ ಫ್ರೆಂಡ್ಸ್ ವತಿಯಿಂದ ಹೆಚ್.ವಿ.ಎಲ್. 2024-25ನೇ ಸಾಲಿನ ಲೀಗ್ ಮಾದರಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಹುಲುಸೆ ಸÀರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶನಿವಾರ ಆರಂಭಗೊAಡಿತು.
ಹೆಬ್ಬಾಲೆ ಗ್ರಾಮ ಪಂಚಾಯತಿ ಮಾಜಿ ಸದಸ್ಯ ವೆಂಕಟೇಶ ಪಂದ್ಯಾಟ ಉದ್ಘಾಟಿಸಿದರು. ನಂತರ ಮಾತಾನಾಡಿದ ಅವರು ಗ್ರಾಮಾಂತರ ಪ್ರದೇಶಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದಾಗಿ ಯುವಕರು ಒಂದೆಡೆ ಸೇರುವ ಮೂಲಕ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಚರ್ಚೆಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ. ಜೊತೆಯಲ್ಲಿ ಗ್ರಾಮೀಣ ಯುವಕರಿಗೆ ಕ್ರೀಡೆಯ ಬಗ್ಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸಹಕಾರಿಯಾಗುತ್ತದೆ. ಇದರ ಮುಖೇನ ಯುವಕರು ಸಂಘಟನೆಯ ಮನೋಭಾವದಿಂದ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಕಾರವಾಗುವುದು ಎಂದರು.
ಈ ಸಂದರ್ಭದಲ್ಲಿ ಕೂಡಿಗೆ ಕ್ರೀಡಾಪಟು ಚಂದ್ರಶೇಖರ್, ಹರೀಶ್, ಹಾಗೂ ಹುಲುಸೆ ಫ್ರೆಂಡ್ಸ್ ಪದಾಧಿಕಾರಿಗಳಾದ ದಿಲೀಪ್, ದರ್ಶನ್, ಗೌತಮ್, ಚಂದು, ಶಂಕರ್, ಅಭಿ, ಸೇರಿದಂತೆ ಸಮಿತಿಯ ಸದಸ್ಯರು, ಲೀಗ್‌ನ ಎಲ್ಲಾ ಕ್ರೀಡಾಪಟುಗಳು ಭಾಗವಹಿಸಿದ್ದರು.
ಈ ವಾಲಿಬಾಲ್ ಪಂದ್ಯಾಟಗಳು ಲೀಗ್ ಮಾದರಿಯಲ್ಲಿ ನಡೆಯುತ್ತಿದ್ದು, ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕಿಗೆ ಸೀಮತವಾಗಿ ಆಯೋಜಿಸಲಾಗಿದೆ. ರಾಜ್ಯ ಮಟ್ಟದ ಕ್ರೀಡಾ ಪಟುಗಳು ಸಹ
ಭಾಗವಹಿಸಿದ್ದಾರೆ.