ಕಾಲೇಜು ತಂಡದೊಂದಿಗೆ ಪ್ರಾಚಾರ್ಯ ಡಾ.ಎಸ್.ಎಸ್. ತೇರದಾಳ, ಬಸವರಾಜ ಕುಮಸಿ, ಡಾ. ಮುಕುಂದ ಮುಂಡರಗಿ, ಡಾ. ಅರ್ಜುನ ಜಂಬಗಿ ಇದ್ದಾರೆ. 
ಜಿಲ್ಲೆ

ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ

ಶಂಕರ ಗೆಜ್ಜಿ

ಬೆಳಗಾವಿ: ಬೈಲಹೊಂಗಲದ ಕೆ.ಆರ್.ಸಿ.ಎಸ್. ಮಹಾವಿದ್ಯಾಲಯ ಆಯೋಜಿಸಿದ್ದ ಪ್ರಸಕ್ತ ಸಾಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಥಮ ವಲಯ ಮತ್ತು ಅಂತರ ವಲಯ ಕಾಲೇಜುಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಣಿ ಚನ್ನಮ್ಮ ವಿವಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ವಲಯದಲ್ಲಿ ದ್ವಿತೀಯ ಹಾಗೂ ಅಂತರ ವಲಯಗಳ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಪಂದ್ಯದಲ್ಲಿ ಭೀಮರಾಯಿ ಚಿಪ್ಪಾಡಿ ಉತ್ತಮ ಸೆಟ್ಟರ್ ಪ್ರಶಸ್ತಿಗೆ ಭಾಜನರಾದರು. ಅಭಿಷೇಕ ಲಮಾಣಿ ನಾಯಕನಾಗಿ ತಂಡವನ್ನು ಮುನ್ನಡೆಸಿದರು. ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯ ಡಾ.ಎಸ್.ಎಸ್. ತೇರದಾಳ, ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕ ಬಸವರಾಜ ಕುಮಸಿ, ಕಾಲೇಜಿನ ಐಕ್ಯೂಎಸಿ ಸಂಯೋಜಕ ಡಾ. ಮುಕುಂದ ಮುಂಡರಗಿ, ಸಾಂಸ್ಕೃತಿಕ ಸಂಯೋಜಕ ಡಾ. ಅರ್ಜುನ ಜಂಬಗಿ ಅಭಿನಂದಿಸಿದ್ದಾರೆ.