ಪುತ್ತೂರು: ಕ್ರೀಡೆ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಿದ್ದು, ಯುವ ಶಕ್ತಿ ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸುವ ಮೂಲಕ ವಿಶ್ವಗುರುವಾಗುವ ದೇಶಕ್ಕೆ ಬೆಂಬಲ ನೀಡಬೇಕು. ಕ್ರೀಡೆ ಶಕ್ತಿ ಹಾಗೂ ಒಗ್ಗಟ್ಟಿನ ಪ್ರದರ್ಶನವಾಗಿದ್ದು, ಪ್ರತಿಯೊಬ್ಬರು ಸೂರ್ತಿಯಿಂದ ಭಾಗವಹಿಸಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.
ತೆಂಕಿಲ ವಿವೇಕಾನಂದ ಅಂಗ್ಲ ಮಾಧ್ಯಮ ಶಾಲೆಯ ಕ್ಯಾಂಪಸ್‌ನಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್, ವಿದ್ಯಾಭಾರತಿ ಕರ್ನಾಟಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಆಶ್ರಯದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಟೂರ್ನಿಯನ್ನು ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ವಿದ್ಯಾಭಾರತಿ ಕರ್ನಾಟಕ ಅಧ್ಯಕ್ಷ ಪರಮೇಶ್ವರ ಹೆಗ್ಗಡೆ ಮಾತನಾಡಿ, ಕ್ರೀಡೆಯಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯವಾಗಿದ್ದು, ಕ್ರೀಡಾಸೂರ್ತಿಯಿಂದ ಭಾಗವಹಿಸುವುದು ಮುಖ್ಯವಾಗಿದೆ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಗೆಲುವಿನ ಗುರಿಯೊಂದಿಗೆ ಸ್ಪಽಸಬೇಕು. ಸೋತವರು ಧೃತಿಗೆಡದೆ ಮುಂದಿನ ಬಾರಿ ಗೆಲ್ಲಲು ಪ್ರಯತ್ನ ಪಡಬೇಕು ಎಂದು ತಿಳಿಸಿದರು.
ಪದ್ಮಲಕ್ಷ್ಮೀ ಉದ್ಘಾಟನಾ ಮಂತ್ರ ಪಠಿಸಿದರು. ವಿದ್ಯಾರ್ಥಿನಿ ಶ್ರೀವರ್ಣ ಕ್ರೀಡಾರ್ಥಿಗಳಿಗೆ ಪ್ರಮಾಣ ವಚನ ಬೋಽಸಿದರು. ದಕ್ಷಿಣ ಕ್ಷೇತ್ರ ಖೇಲ್ ಸಂಯೋಜಕ್ ಯು. ಪಿ. ಹರಿದಾಸ್, ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಟೂರ್ನಿ ಸಂಯೋಜಕ ಕಿಶೋರ್ ಚೌವಾಣ್, ವಿದ್ಯಾಭಾರತಿ ಪ್ರಾಂತ ಕಾರ್ಯದರ್ಶಿ ವಸಂತ ಮಾಧವ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶಿವಪ್ರಕಾಶ್ ಉಪಸ್ಥಿತರಿದ್ದರು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕ ಸತೀಶ್ ಕುಮಾರ್ ರೈ ಸ್ವಾಗತಿಸಿದರು. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ ಖೇಲ್ ಪ್ರಮುಖ್ ಕೆ. ಆರ್. ಕೆ. ಸತ್ಯನಾರಾಯಣ ಪ್ರಸ್ತಾವನೆಗೈದರು. ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾಭಾರತಿ ಖೇಲ್ ಪ್ರಮುಖ್ ಕರುಣಾಕರ ವಂದಿಸಿದರು. ಶಿಕ್ಷಕಿಯರಾದ ಸೌಮ್ಯ ಕುಮಾರಿ, ಸುಜಾತ ಕಾರ್ಯಕ್ರಮ ನಿರೂಪಿಸಿದರು.