ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ ಉದ್ಘಾಟಿಸಿದರು 
ಜಿಲ್ಲೆ

ಸ್ವಯಂಪ್ರೇರಿತ ರಕ್ತದಾನ :155 ಯೂನಿಟ್ ರಕ್ತ ಸಂಗ್ರಹ

ಇಂದಿರಾ ಎನ್ ಕೆ

ಕೋಟ: ಕೋಟೇಶ್ವರದ ಶಾರದಾ ಕಲ್ಯಾಣ ಮಂಟಪದಲ್ಲಿ ಭಾನುವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕ ಅಧ್ಯಕ್ಷ ನಾಗರಾಜ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ ಉದ್ಘಾಟಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ಸತೀಶ್.ಎಂ ನಾಯ್ಕ, ಮೊಗವೀರ ಸಮುದಾಯದ ಬಗ್ವಾಡಿ ಹೋಬಳಿ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಮಾಜಿ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ, ರಕ್ತ ನಿಧಿ ಮಣಿಪಾಲದ ಡಾ.ಬಿಸ್ಮಿತಾ, ಸಂಘಟನೆ ಗೌರವಾಧ್ಯಕ್ಷ ಸುರೇಶ್ ಮೊಗವೀರ ಶಾನಾಡಿ, ಮಹಿಳಾ ಘಟಕ ಅಧ್ಯಕ್ಷ ಉಷಾ ಬಂಗೇರ ಮಾರ್ಕೋಡು, ಸಂಘಟನೆ ಪ್ರಮುಖರಾದ ಚಂದ್ರ ಬಂಗೇರ, ರೋಟರಿ ಕ್ಲಬ್ ಕೋಟೇಶ್ವರ ಕಾರ್ಯದರ್ಶಿ ಸುಭಾಷ್‌ಚಂದ್ರ ಶೆಟ್ಟಿ, ಜಿಲ್ಲಾ ಸಂಘಟನೆ ಪ್ರಧಾನ ಕಾರ್ಯದರ್ಶಿ ರವೀಂದ್ರ ಪುತ್ರನ್ ಉಪಸ್ಥಿತರಿದ್ದರು. ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಮಾಜಿ ಅಧ್ಯಕ್ಷ ಸುನೀಲ್ ಜಿ ನಾಯ್ಕ್ ಸ್ವಾಗತಿಸಿದರು. ಕಾರ್ಯದರ್ಶಿ ರಾಘವೇಂದ್ರ ಹಳೆಅಳಿವೆ ವಂದಿಸಿದರು. ಅಶೋಕ ತೆಕ್ಕಟ್ಟೆ ನಿರ್ವಹಿಸಿದರು. ಒಟ್ಟು 155 ಯುನಿಟ್ ರಕ್ತ ಸಂಗ್ರಹಿಸಲಾಯಿತು.