ಜಿಲ್ಲೆ

ಮತ ಚಲಾಯಿಸಿ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಿ

ಎಂ.ರವಿ

ಪಾಂಡವಪುರ: ಒಂದೊಂದು ಮತ ಕೂಡ ತನ್ನದೇ ಆದ ಮಹತ್ವವನ್ನು ಹೊಂದಿರುತ್ತದೆ. ದೇಶದ ಸುಭದ್ರತೆ ಹಾಗೂ ಉತ್ತಮ ನಾಯಕತ್ವಕ್ಕೆ ಮತ ಚಲಾಯಿಸುವುದರ ಮೂಲಕ ಉತ್ತಮ ಆಭ್ಯರ್ಥಿಯ ಆಯ್ಕೆ ನಿಮ್ಮದಾಗಿರುತ್ತದೆ ಎಂದು ತಾಪಂ ಇಒ ಲೋಕೇಶ್‌ಮೂರ್ತಿ ಹೇಳಿದರು.

ತಾಲೂಕಿನ ಕೆನ್ನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆ ಮತ್ತು ಸಂಸ್ಥೆಯ ಕಾಲೇಜಿನ ಸಹಯೋಗದಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮತದಾನ ದಿವಸ ಎಲ್ಲ ಕೆಲಸವನ್ನು ಬದಿಗಿಟ್ಟು ಮತದಾನ ಮಾಡಬೇಕು. ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ತಪ್ಪದೆ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.

18 ವರ್ಷ ವಯಸ್ಸಿನ ಪ್ರತಿಯೊಬ್ಬರೂ ಮತದಾನ ಮಾಡಲು ನಮ್ಮ ಸಂವಿಧಾನ ಅವಕಾಶ ಕಲ್ಪಿಸಿದ್ದು, ನನ್ನ ಮತ ನನ್ನ ಹಕ್ಕು ಎಂಬ ಘೋಷವಾಕ್ಯದೊಡನೆ ಯುವಕ, ಯುವತಿಯರು ಮತದಾನ ಮಾಡುವುದರ ಮೂಲಕ ದೇಶದ ಅಭಿವೃದ್ಧಿಗೆ ಸ್ವ-ಇಚ್ಛೆಯಿಂದ ಅರ್ಹ ಅಭ್ಯರ್ಥಿಗೆ ಮತ ಚಲಾಯಿಸಬೇಕು. ಗ್ರಾಮೀಣ ಭಾಗದ ಜನರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅನುಕೂಲವಾಗುತ್ತದೆ. ಮತದಾನದಿಂದ ಯಾರೂ ವಂಚಿತರಾಗಬಾರದು ಎಂದು ತಿಳಿಸಿದರು.

ಮತದಾನ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸುರೇಂದ್ರ, ಎಸ್‌ಎಸ್‌ಇಟಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಪಂಚಲಿಂಗೇಗೌಡ, ಮಹದೇವ್, ಮ.ನರಸಿಂಹ, ವಿಕಾಸ್, ನಾರಾಯಣ್, ಮಂಜುನಾಥ್ ಇತರರು ಇದ್ದರು.