ಕೊಪ್ಪ: ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದ ಬಳಿ ತಾಲೂಕು ಸ್ವೀಪ್ ಸಮಿತಿಯಿಂದ ಶುಕ್ರವಾರ ಮತದಾನ ಜಾಗೃತಿ ಅಭಿಯಾನ ನಡೆಸಲಾಯಿತು.
ಕಾರ್ಮಿಕ ಇಲಾಖೆ ಅಧಿಕಾರಿಗಳು, ತಾಪಂ ಸಿಬ್ಬಂದಿ, ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಗ್ರಾಪಂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಪಪಂ ನಗರ ಪುನರ್ವಸತಿ ಕಾರ್ಯಕರ್ತರು, ಅಂಗವಿಕಲರು ಜಾಥಾ ನಡೆಸಿದರು. ಸಹಾಯಕ ಲೆಕ್ಕಾಧಿಕಾರಿ ಪ್ರಮೋದ್ ಮಾತನಾಡಿ, ಮತದಾನ ದೇಶದ ಪ್ರಜೆಯ ಹಕ್ಕು ಹಾಗೂ ಕರ್ತವ್ಯ. ಎಲ್ಲರೂ ಕಡ್ಡಾಯವಾಗಿ ಹಕ್ಕು ಚಲಾಯಿಸಬೇಕು ಎಂದರು. ಸಹಾಯಕ ನಿರ್ದೇಶಕ ಚೇತನ್ ಪ್ರತಿಜ್ಞಾವಿಧಿ ಬೋಧಿಸಿದರು. ಗ್ರಾಪಂ ಪುನರ್ವಸತಿ ಕಾರ್ಯಕರ್ತೆ ಶ್ಯಾಮಲಾ ಅವರು ಮತದಾನ ಜಾಗೃತಿ ಸ್ಫೂರ್ತಿ ಗೀತೆ ಹಾಡಿದರು.